Home ಬ್ರೇಕಿಂಗ್ ನ್ಯೂಸ್ 🔥 ಮುಲ್ಕಿ: ಮೇ 6ರಂದು ಮುಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮುಲ್ಕಿ: ಮೇ 6ರಂದು ಮುಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

0
326

ಮುಲ್ಕಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 6ರಂದು ಮುಲ್ಕಿಯಲ್ಲಿ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ನಿಗದಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಮಧ್ಯದಲ್ಲಿರುವ ಮುಲ್ಕಿಯಲ್ಲಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಇದು ತಾತ್ಕಾಲಿಕವಾಗಿ ನಿಗದಿಯಾಗಿರುವ ದಿನಾಂಕ ಬದಲಾಗುವ ಸಾಧ್ಯತೆಯೂ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕರ್ನಾಟಕಕ್ಕೆ ಬರುವ ನಿರೀಕ್ಷೆಯಿದೆ. ಮೋದಿಗೂ ಮೊದಲೇ ಆದಿತ್ಯನಾಥ್ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ. ಕರಾವಳಿ ಕರ್ನಾಟಕಕ್ಕೆ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಎಂಟು ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಉಡುಪಿಯಲ್ಲಿ ನಾಲ್ಕು ಮತ್ತು ಚಿಕ್ಕಮಗಳೂರಿನಲ್ಲಿ ಐದು ಸ್ಥಾನಗಳನ್ನು ಹೊಂದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳನ್ನು ಬಿಜೆಪಿ ಗೆದ್ದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ಕನಿಷ್ಠ 15-20 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಮೇ 10ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಕರ್ನಾಟಕದಲ್ಲಿ 15-20 ಸಾರ್ವಜನಿಕ ಸಭೆಯಗಳನ್ನು ನಡೆಸುತ್ತಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ. ಕರಾವಳಿ ಜಿಲ್ಲೆಯಲ್ಲಿ ಹಿಂದೂ ಮತ ಬ್ಯಾಂಕ್ ಕ್ರೋಡೀಕರಿಸುವ ನಿಟ್ಟಿನಲ್ಲಿ ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಅಖಾಡಕ್ಕೆ ಇಳಿಸಲಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಪ್ರಚಾರ ಮಾಡಿದ್ದರು. ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಮುನ್ನಡೆಸಿದ ನಂತರ ಎರಡನೇ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರಲು, ಅವರು ರಾಜ್ಯ ಚುನಾವಣೆಗಳಲ್ಲಿ ಕೇಸರಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಿಂದುತ್ವದ ಪರ ಅಲೆ ಇರುವುದರಿಂದ ಬಿಜೆಪಿ ಯೋಗಿ ಅವರನ್ನು ಅಖಾಡಕ್ಕೆ ಇಳಿಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಿಂದುತ್ವದ ಪರ ಅಲೆ ಇದೆ. ಈ ಹಿನ್ನೆಲೆಯ ಯೋಗಿ ಆದಿತ್ಯನಾಥ್ ಅವರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ತಂತ್ರ ರೂಪಿಸಿದೆ. ಚುನಾವಣೆಗೂ ಮುನ್ನವೇ ಬಿಜೆಪಿ ಆಘಾತಗಳನ್ನು ಎದುರಿಸಿದೆ. ಉತ್ತರ ಕರ್ನಾಟಕ ಪ್ರಭಾವಿ ಲಿಂಗಾಯತ ಮುಖಂಡರನ್ನು ಕೇಸರಿ ಪಕ್ಷ ಕಳೆದುಕೊಂಡಿದೆ. ಬೆಳಗಾವಿ ಭಾಗದ ಪ್ರಬಲ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಲಿಂಗಾಯತರ ಪ್ರಬಲ ನಾಯಕನೆಂದೇ ಗುರುತಿಸಿಕೊಂಡಿರುವ ಯಡಿಯೂರಪ್ಪನವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಿರಿಯ ನಾಯಕ, ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪನವರು ಸಹ ಚುನಾವಣಾ ರಾಜಕಾರಣದಿಂದ ಹೊರನಡೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆಯನ್ನೂ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷವು ಮೋದಿ ಹಾಗೂ ಯೋಗಿ ಅವರ ವರ್ಚಸ್ಸನ್ನು ಬಳಸಿಕೊಳ್ಳಲು ಮುಂದಾಗಿದೆ.

NO COMMENTS

LEAVE A REPLY

Please enter your comment!
Please enter your name here