ದೇವನಹಳ್ಳಿ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವದ ಅತೀ ಎತ್ತರದ ಕೆಂಪೇಗೌಡ ಪ್ರತಿಮೆಯ ಅನಾವರಣವೂ ಒಳಗೊಂಡಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಾರತೀಯ ವಾಯುಪಡೆಯ ವಿಶೇಷ ವಿಮಾನದಲ್ಲಿ ಇಲ್ಲಿ ಇಂದು ನಗರಕ್ಕೆ ಆಗಮಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸಧ ತೇಜಸ್ವಿ ಸೂರ್ಯ, ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ಆರಕ್ಷಕ ಆಯುಕ್ತ ಪ್ರತಾಪ್ ರೆಡ್ದಿ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಪ್ರಧಾನಿ ಆಗಮನದ ಸಂದರ್ಭದಲ್ಲಿ ತುಂತುರು ಮಳೆ ಬಂದಿದೆ. ಪ್ರಧಾನಿ ಅವರನ್ನು ವರುಣ ಕೂಡಾ ಸ್ವಾಗತಿಸಿದ್ದು ವಿಶೇಷವಾಗಿತ್ತು.
