ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯಕಲಾವಿದ ಮೋಹನ್ ಜೂನೇಜ ಅವರು ಶನಿವಾರ ಬೆಳಗ್ಗೆ ನಿಧನರಾದರು.
ಶುಕ್ರುವಾರ ರಾತ್ರಿ ತೀವ್ರ ಅನಾರೋಗ್ಯ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕ್ಕಬಾಣಾವರದ ಸಪ್ತಗಿರಿ ಹಾಸ್ಪಿಟಲ್ಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಮೋಹನ್ ಜುನೇಜಾ ಅವರು ಕನ್ನಡ ಹಿರಿತೆರೆ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದರು. ‘ವಠಾರ’ ಸೀರಿಯಲ್ನಿಂದ ಜನಪ್ರಿಯರಾದ ಮೋಹನ್ ನಂತರ ಹಲವಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಮತ್ತು ಹಾಸ್ಯನಟನಾಗಿ ರಂಜಿಸಿದ್ದಾರೆ. `ಚೆಲ್ಲಾಟ’ ಚಿತ್ರದ ಮಧುಮಗನ ಪಾತ್ರ ಇವರಿಗೆ ತುಂಬಾ ಪ್ರಸಿದ್ಧಿ ತಂದುಕೊಟ್ಟಿತ್ತು.

