ಕುಂದಾಪುರ: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸುತ್ತಿದ್ದ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಹರಿಯಾಣ ರಾಜ್ಯ ಬರ್ಸಿ ಜಟಾನ್‌ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ.ಇವರು ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್ ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Trending
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
- ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ಕೈತಪ್ಪಿದ್ದು ರಾಜಕೀಯ ಲೆಕ್ಕಾಚಾರವೇ? ಸಿದ್ದರಾಮಯ್ಯ ಸುತ್ತ ತಿರುಗುತ್ತಿರುವ ಚರ್ಚೆಗಳ ವಿಶ್ಲೇಷಣೆ
- ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ: ಆಗಸ್ಟ್ 4ರಂದು ಅಂಗನವಾಡಿ, ಶಾಲೆಗಳಿಗೆ ಮತ್ತೆ ರಜೆ
- ಶಿಕ್ಷಣ, ಕಲಾ ಹಾಗೂ ಸಮಾಜಸೇವೆಗೆ ಯು.ಆರ್. ಶೆಟ್ಟಿಗೆ ‘ಸ್ವಾಮಿ ವಿವೇಕಾನಂದ ಪ್ರಶಸ್ತಿ’ ಪ್ರದಾನ
- ಸಹಕಾರ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಬದುಕಿನ ಅನಾವರಣ: ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ
- ಕ್ರಿಸ್ಟಲ್ ಪ್ಯೂರ್ ಹರ್ಬಲ್ ಬ್ಯೂಟಿ & ವೆಲ್ನೆಸ್ ಉತ್ಪನ್ನಗಳ ಭವ್ಯ ಅನಾವರಣ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರಿಗೆ ಸನ್ಮಾನ
- ಉಡುಪಿ: ಬಾರ್-ಪಬ್ಗಳ ಮೇಲೆ ಪೊಲೀಸರ ವಿಶೇಷ ದಾಳಿ; ಅಪ್ರಾಪ್ತರು ಮದ್ಯ ಸೇವನೆ ವೇಳೆ ಪತ್ತೆ
