ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ಭಾನುವಾರ ಬೆಳಗ್ಗೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾತ್ವಿಕ್ ಭಂಡಾರಿ(21) ಆತ್ಮಹತ್ಯೆ ಮಾಡಿಕೊಂಡಾತ. ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು ಆತನ ತಾಯಿ ಎಬ್ಬಿಸುವಾಗ ಕೋಪಗೊಂಡಿದ್ದು, ಕೆಲವು ನಿಮಿಷಗಳ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.