ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಮುಲೈ ಮುಹಿಲನ್ ಇದಕ್ಕೂ ಮೊದಲಿ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿದ್ದು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.
1986 ರಲ್ಲಿ ಜನಿಸಿದ ಅವರು 2013 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿಕುಮಾರ್ ಅವರಿಗೆ ಇನ್ನು ಹುದ್ದೆ ತೋರಿಸಿಲ್ಲ.