ಮಂಗಳೂರು: ಮಳಲಿ ವಿವಾದಿತ ದರ್ಗಾಕ್ಕೆ ಸಂಬಂಧಿಸಿದಂತೆ ಇಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಹಿಂದೆ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿಯ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಗೊಂಡ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯವು ವಿಚಾರಣೆಯನ್ನು ಜೂ.6ಕ್ಕೆ ಮುಂದೂಡಿತ್ತು.
ಜೂನ್ 1ರಂದು ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆಸಿದ ನ್ಯಾಯವಾದಿಗಳು ನಡೆಸಿದ್ದ ವಾದಗಳಿಗೆ ಬದ್ಧರಾಗಿ ನ್ಯಾಯಾಲಯದ ಗಮನ ಸೆಳೆಯಲು ಮುಂದಾಗಿದ್ದರು. ಇಂದು ಈ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಲಿದೆ.
