ವಿಟ್ಲ : ವಿಟ್ಲದ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಕೊಲೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನವಗ್ರಾಮ ನಾಟೆಕಲ್ಲು ನಿವಾಸಿ ಸೆಂಟ್ರಿಂಗ್ ಶೇಖರ ಅಲಿಯಾಸ್ ಶೇಖರ್ ಪೂಜಾರಿ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಮೇ 7 ರಂದು ಲತಾ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಶೇಖರ್ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಲತಾ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

