ಮಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್ರವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಆಗಮಿಸಿ ಜಿಲ್ಲೆಯಲ್ಲಿ ನಡೆಯುವ ಯುವ ಕಾಂಗ್ರೆಸ್ನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಮೊಹಮ್ಮದ್ ಹಾರಿಸ್ ನಲಪಾಡ್ ರವರು ರಾಜ್ಯಾಧ್ಯಕ್ಷರಾದ ಬಳಿಕ ಮೊದಲನೇ ಬಾರಿಗೆ ಜಿಲ್ಲೆಗೆ ಆಗಮಿಸಲಿರುವ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಭವ್ಯವಾಗಿ ಸ್ವಾಗತಿಸಲು ತೀರ್ಮಾನಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರದ ಸೈಂಟ್ ಸೆಬಾಸ್ಟಿಯನ್ ಹಾಲ್ ಬೆಂದೂರ್ ಮಂಗಳೂರು ಇಲ್ಲಿ ನಡೆಯುವ ಯುವ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

