Tuesday, September 26, 2023

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಬ್ಯಾನರ್ ಹರಿದ ಕಿಡಿಗೇಡಿಗಳು

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ನಡೆದಿದೆ. ಸಜೀಪಮೂಡದ ಕಂದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ...
More

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಳಿನ್ ಕುಮಾರ್ ಕಟೀಲ್

    ಬಳ್ಳಾರಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ.

    ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಈ ಬಗ್ಗೆ ಹೇಳಿಕೊಂಡಿದ್ದಾರೆ.

    ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದಿದ್ದಾರೆ.

    ಸ್ಥಾನಕ್ಕೆ ರೇಸ್: ಬಿಜೆಪಿಯಲ್ಲಿ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರೇಸ್ ಆರಂಭವಾಗಿದೆ. ಮಾಜಿ ಸಚಿವ ವಿ ಸೋಮಣ್ಣ ಅವರು ಶುಕ್ರವಾರ ಈ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ತಮ್ಮನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ ಮಾಜಿ ಸಚಿವ ವಿ.ಸೋಮಣ್ಣ ವರಿಷ್ಠರಿಗೆ ಪತ್ರ ಬರೆದಿದ್ದಾರೆ.

    ವರಿಷ್ಠರಿಗೆ ಪತ್ರ ಬರೆದಿರುವ ಬಗ್ಗೆ ಖುದ್ದು ವಿ.ಸೋಮಣ್ಣನವರೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ತಾವು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಪ್ರತಿಪಾದಿಸಿದ್ದಾರೆ. ನಾನು ಚುನಾವಣೆ ಮುಗಿದ ಬಳಿಕ ದೆಹಲಿಗೆ ಎರಡು ಬಾರಿ ಭೇಟಿ ನೀಡಿದ್ದೇನೆ. ಪಕ್ಷ ಸಂಘಟನೆಯ ದೃಷ್ಟಿಯಿಂದ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ. ಜೊತೆಗೆ ವರಿಷ್ಠರಿಗೆ ಈ ಸಂಬಂಧ ಪತ್ರವನ್ನೂ ಬರೆದಿದ್ದೇನೆ. ನಾನು ಬಿಜೆಪಿಗೆ ಬಂದು 15 ವರ್ಷವಾಗಿದೆ. ಪಕ್ಷ ನನಗೆ ಸ್ಥಾನಮಾನ ನೀಡಿದ್ರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.

    ಚಿಂಚೋಳಿ, ಹಾನಗಲ್ , ಬಸವಕಲ್ಯಾಣ, ಸಿಂದಗಿ, ಮಸ್ಕಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ನಾನು ಕೆಲಸ ಮಾಡಿದ್ದೇನೆ. ರಾಜ್ಯಾಧ್ಯಕ್ಷ ಹುದ್ದೆ ಉದ್ಯೋಗ ಅಲ್ಲ. ನಾನು ನನ್ನ ಅನುಭವ ಬಳಸಿ ಕೆಲಸ ಮಾಡುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇನೆ. ಪ್ರಧಾನಿ ಹೊರತು ಪಡಿಸಿ ಅಮಿತ್‌ ಶಾ, ಜೆ.ಪಿ. ನಡ್ಡಾ , ಬಿ.ಎಲ್‌.ಸಂತೋಷ್‌ ಎಲ್ಲರನ್ನೂ ಭೇಟಿ ಮಾಡಿದ್ದೇನೆ ಎಂದರು.

    ಯಡಿಯೂರಪ್ಪ ರಾಷ್ಟ್ರೀಯ ನಾಯಕರು, ಸಂಸದೀಯ ಮಂಡಳಿ ಸದಸ್ಯರು. ಯಡಿಯೂರಪ್ಪ ಮನೆಗೂ ಹೋಗುತ್ತೇನೆ. ಅವರೆಲ್ಲರೂ ಕೊಟ್ಟ ಟಾಸ್ಕ ನ್ನು ನಾನು ಒಪ್ಪಿ ಮಾಡಿಲ್ವಾ ? ನಾನು 24/7 ಕೆಲಸ ಮಾಡುತ್ತಿದ್ದವನು. ಈಗ ಕೆಲಸ ಇಲ್ಲದಾಗಿದೆ. ನಾನು ಎಲ್ಲರನ್ನೂ ನಂಬಿಕೆಯಿಂದ ತೆಗೆದುಕೊಂಡು ಹೋಗುತ್ತೇನೆ. ನನ್ನಷ್ಟು ಓಪನ್‌ ಯಾರೂ ಇಲ್ಲ. ನನಗೆ ಅವಕಾಶ ನೀಡಿದರೆ ಗಾಂಭೀರ್ಯದಿಂದ ಕೆಲಸ ಮಾಡುತ್ತೇನೆ. ನೂರು ದಿನ ನನಗೆ ಅವಕಾಶ ಕೊಟ್ಟು ನೋಡಿ, ಕೆಲಸ ಮಾಡಿ ತೋರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    Don't Miss

    ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!

    ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ...

    ಶೀಘ್ರವೇ ರಾಜ್ಯಾಧ್ಯಂತ ‘ಹುಕ್ಕಾಬಾರ್’ ನಿಷೇಧ – ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು: ಜನರ ಆರೋಗ್ಯ ಮೇಲೆ ಪರಿಣಾಮ ಬೀರುವಂತ ಹುಕ್ಕಾಬಾರ್ ಗಳನ್ನು ರಾಜ್ಯಾಧ್ಯಂತ ನಿಷೇಧಿಸೋ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿಷೇಧ ಆದೇಶವನ್ನು ಶೀಘ್ರವೇ ಜಾರಿಗೊಳಿಸೋದಾಗಿ ಆರೋಗ್ಯ ಸಚಿವ ದಿನೇಶ್...

    ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಿಕಲ ಚೇತನರಿಗೆ ವೀಲ್ ಚೆಯರ್, ವಾಕಿಂಗ್ ಸ್ಟಿಕ್ ಮುಂತಾದ ಪರಿಕರಗಳ ವಿತರಣೆ

    ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಾಯ್ಸ್ ಆಫ್ ಟ್ರಸ್ಟ್ ಮಂಗಳೂರು ಇದರ ಉದ್ಘಾಟನೆ ಹಾಗೂ ಇದರ ಅಧ್ಯಕ್ಷ ಝಹೀರ್ ಅಬ್ಬಾಸ್ ರವರ ಪದಗ್ರಹಣ...

    ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ- ಪ್ರಕರಣ ದಾಖಲು

    ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

    ಮಂಗಳೂರು: ಕಾಟಿಪಳ್ಳದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಕಾಲ್ನಡಿಗೆ ಜಾಥಾ ಮತ್ತು ಜನಜಾಗೃತಿ ಶಿಬಿರ

    ಮಂಗಳೂರು: ಮಾದಕದ್ರವ್ಯ ವಿರುದ್ಧ ಹೋರಾಟ ಸಮಿತಿ, ಕಾಟಿಪಳ್ಳ ಇದರ ವತಿಯಿಂದ ಪಣಂಬೂರು ಮುಸ್ಲಿಂ ಜಮಾತ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವಿರುದ್ಧ ಜನಜಾಗ್ರತಿ ಕಾಲ್ನಡಿಗೆ...