ಮಂಗಳೂರು: ಶ್ರೀ ಬಾಲಕೃಷ್ಣ ಮಂದಿರ (ರಿ.), ಕುಂಪಲ ಇದರ ರಜತ ಪರ್ವದ ಸಮಾರೋಪ ಸಮಾರಂಭ ಕಾರ್ಯಕ್ರಮ ಕುಂಪಲೋತ್ಸವ 2022 ಇದರ ಆಮಂತ್ರಣ ಪತ್ರಿಕೆಯನ್ನು, ಕಾರ್ಯಕ್ರಮ ಉದ್ಘಾಟನೆ ಮಾಡಲಿರುವ ಮಂಗಳೂರು ಲೋಕಸಭಾ ಸದಸ್ಯರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಮಂದಿರದ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ರಜತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾದ ಮೋಹನ್ ಶೆಟ್ಟಿ ಕುಂಪಲ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅನಿಲ್ ಬಗಂಬಿಲ ಉಪಸ್ಥಿತರಿದ್ದರು.