ಬೆಂಗಳೂರು: ರಾಜಧಾನಿ ಬೆಂಗಳೂರಿನ 243 ‘ನಮ್ಮ ಕ್ಲಿನಿಕ್’ ಸೇರಿದಂತೆ ರಾಜ್ಯದ 438 ನಮ್ಮ ಕ್ಲಿನಿಕ್‌ಗಳು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ 15ರ ವೇಳೆಗೆ ಕಾರ್ಯಾರಂಭಿಸಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ” ನಮ್ಮ ಕ್ಲಿನಿಕ್ ” ಮಾದರಿ ವೀಕ್ಷಿಸಿದ ಬಳಿಕ ಅವರು ಮಾದ್ಯಮದೊಂದಿಗೆ ಮಾತನಾಡಿದ ಅವರು, ” ನಮ್ಮ ಕ್ಲಿನಿಕ್‌ನಲ್ಲಿ ವೈದ್ಯ, ನರ್ಸ್, ಲ್ಯಾಬ್ ಟೆಕ್ನಿಷಿಯನ್ ಹಾಗೂ ಡಿ ಗ್ರೂಪ್‌ನ ತಲಾ ಒಬ್ಬ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಇದು ಪ್ರಾಥಮಿಕ ಆರೋಗ್ಯ ಕೇಂದ್ರದಂತೆಯೇ ಕೆಲಸ ನಿರ್ವಹಿಸಲಿದೆ. ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.’ನಮ್ಮ ಕ್ಲಿನಿಕ್’ಗಳು ‘ಕನ್ನಡ ರಾಜ್ಯೋತ್ಸವ’ಕ್ಕೆ ಬಿಬಿಎಂಪಿಯ ಎಲ್ಲಾ 243 ವಾರ್ಡ್‌ಗಳಲ್ಲಿ ಕಾರ್ಯಾರಂಭಕ್ಕೆ ತಯಾರಿ ನಡೆದಿದೆ. ಬೆಂಗಳೂರಿನ ಎಲ್ಲ 243 ವಾರ್ಡ್ ಸೇರಿದಂತೆ ರಾಜ್ಯದ ಒಟ್ಟು 438 ಕಡೆ ನಮ್ಮ ಕ್ಲಿನಿಕ್ ಆರಂಭಿಸುವುದಾಗಿ ಮುಖ್ಯಮಂತ್ರಿಗಳು 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದರು. ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸವಿ ನೆನಪಿಗಾಗಿ ಜುಲೈ 28ರಂದು ಪ್ರಾಯೋಗಿಕವಾಗಿ ಬೆಂಗಳೂರಿನ ಎರಡು ತಾಣಗಳಲ್ಲಿ ಕ್ಲಿನಿಕ್ ಆರಂಭವಾಗಿದ್ದು, ಉಳಿದ ವಾರ್ಡ್‌ಗಳಲ್ಲಿ ‘ಕನ್ನಡ ರಾಜ್ಯೋತ್ಸವ’ಕ್ಕೆ ಆರಂಭಿಸುವುದಕ್ಕೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
