Thursday, March 30, 2023

BREAKING NEWS : ರಾಜ್ಯದ 5 ಮತ್ತು 8 ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. 5 ಮತ್ತು 8...
More

    Latest Posts

    ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಮೃತದೇಹ ಪತ್ತೆ..!

    ಕಡಬ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15).

    ಕಡಬ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು

    ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ...

    ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮಹಿಳೆಗೆ ಬಸ್ ಡಿಕ್ಕಿ – ಮಹಿಳೆ ಸಾವು

    ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ನಡೆದಿದೆ. ಬಸ್ ಪತ್ತೆ...

    ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ...

    ಯಕ್ಷರಂಗದ ಹಿರಿಯ ಭಾಗವತ ಬಲಿಪ ನಾರಾಯಣ ನಿಧನ, ತುಳುನಾಡ ರಕ್ಷಣಾ ವೇದಿಕೆ ಅಂತರಾಷ್ಟ್ರೀಯ ಗೌರವ ಅದ್ಯಕ್ಷ ಡಾ. ಡೇವಿಡ್ ಪ್ರಾಂಕ್ ಪೆರ್ನಾಂಡಿಸ್, ಯೋಗಿಶ್ ಶೆಟ್ಟಿ ಜಪ್ಪು ಸಂತಾಪ

    ಮಂಗಳೂರು :ಯಕ್ಷಗಾನದ ತೆಂಕು ತಿಟ್ಟಿನ ಹೆಸರಾಂತ ಭಾಗವತರಾದ ಬಲಿಪ ನಾರಾಯಣ ಭಾಗವತ ಅವರು ಇಂದು ಗುರುವಾರ ನಿಧನರಾಗಿದ್ದಾರೆ.

    ಇವರಿಗೆ ತುಳುನಾಡ ರಕ್ಷಣಾ ವೇದಿಕೆ ಅಂತರಾಷ್ಟ್ರೀಯ ಗೌರವ ಅದ್ಯಕ್ಷ ಡಾ. ಡೇವಿಡ್ ಪ್ರಾಂಕ್ ಪೆರ್ನಾಂಡಿಸ್, ಯೋಗಿಶ್ ಶೆಟ್ಟಿ ಜಪ್ಪು ಸಂತಾಪ ಸೂಚಿಸಿದರು.

    ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯಾದ ‘ಬಲಿಪ ಹಾಡುಗಾರಿಕೆ’ಯನ್ನು ದಶಕಗಳಿಂದ ಯಕ್ಷಪ್ರಿಯರಿಗೆ ಉಣಪಡಿಸಿದ ಶ್ರೀಯುತ ಬಲಿಪ ನಾರಾಯಣ ಭಾಗವತರು ಇಂದು (84 ವರ್ಷ) ನಮ್ಮನ್ನಗಲಿದ್ದಾರೆ… ಕಂಚಿನ ಕಂಠ ಮೌನವಾಗಿದೆ… ಭಾಗವತಿಕೆಯ ರಂಗದಲ್ಲಿ ಅಗ್ರಜರಾಗಿ ನಿಂತ ಬಲಿಪರು ಮಂಗಳ ಹಾಡಿನೊಂದಿಗೆ ಇಹಲೋಕದ ಬಂಧ ಕಳಚಿ ಸರ್ವವಂದ್ಯನ ಕಿವಿಗಳನ್ನು ತಂಪಾಗಿಸಲು ನಾಕಕ್ಕೆ ಸರದಿದ್ದಾರೆ… “ನೋಡಿ ನಿರ್ಮಲ ಜಲ ಸಮೀಪದಿ…”, “ಜಗವು ನಿನ್ನಾಧೀನ ಖಗಪತಿ ವಾಹನ…”, “ರಾಮಕೃಷ್ಣರು ಮನೆಗೆ ಬಂದರು ಬಾಗಿಲು ತೆರೆಯಿರೊ”, “ಎಲವೋ ಕುಂತೀ ಸುತನೇ” ಎಂಬಿತ್ಯಾದಿ ವಿವಿಧ ಸ್ವರ ಏರಿಳಿತದ ಸಮ್ಮಿಲನ-ಸಮತೋಲನ ಹೊಂದಿದ್ದ ‘ಬಲಿಪ’ ಶೈಲಿಗೆ ಅದರದ್ದೇ ಆದ ತೂಕ-ಸ್ಥರ…

    ಅಜ್ಜ ಬಲಿಪರು ಹುಟ್ಟುಹಾಕಿದ ಯಕ್ಷಗಾನ ತೆಂಕುತಿಟ್ಟು ಹಾಡುಗಾರಿಕೆಯ ಬಲಿಪ ಶೈಲಿಯ ಪ್ರಬಲ ಪ್ರತಿಪಾದಕ,ಕಾಸರಗೋಡು ಪೆರ್ಲ ಪಡ್ರೆಯ ಯಕ್ಷಗಾನ ಸೊಗಡಿನ ಮಣ್ಣಲ್ಲಿ ಹುಟ್ಟಿ ಬೆಳೆದು ಮೂಡುಬಿದಿರೆ ನೂಯಿಯಲ್ಲಿದ್ದು ತನ್ನ ಮುಂದಿನ ತಲೆಮಾರಿಗೆ ಬಲಿಪ ಛಾಪನ್ನು ಮೆರೆದ ಶ್ರೀ ಬಲಿಪ ನಾರಾಯಣ ಭಾಗವತರು ಇದೀಗ ನಿಧನರಾದ ಸುದ್ದಿ ಬಂದಿದೆ.
    ಇನ್ನು ಮುಂದೆ ಅದೊಂದು ನೆನಪು, ದಂತಕತೆ ಮಾತ್ರ. ಕಂಬನಿ ಮಿಡಿವ ಆರ್ದ್ರ ಹೃದಯ ತುಂಬಿದ ಭಾವನೆಗಳೊಂದಿಗೆ ಆ ಚೇತನಕ್ಕೆ ನಮೋ ನಮಃ…

    ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.

    ವೈಯಕ್ತಿಕ ಜೀವನ

    ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ 13, 1938ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು ೭ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು ೧೩ನೇ ವರ್ಷದಲ್ಲಿ ರಂಗ ಪ್ರವೇಶಗೈದರು. ಇವರ ಪತ್ನಿ ಶ್ರೀಮತಿ ಜಯಲಕ್ಷ್ಮಿ. ಇವರ ನಾಲ್ವರು ಪುತ್ರರ ಪೈಕಿ, ಮಾಧವ ಬಲಿಪರಿಗೆ ಹಿಮ್ಮೇಳವಾದನ ತಿಳಿದಿದ್ದು, ಶಿವಶಂಕರ ಬಲಿಪ ಮತ್ತು ದಿ. ಪ್ರಸಾದ ಬಲಿಪರು ಉತ್ತಮ ಭಾಗವತರು, ಪ್ರಸಾದ ಬಲಿಪರು ಕಟೀಲು ಮೇಳದಲ್ಲಿ ಮುಖ್ಯ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನೋರ್ವ ಪುತ್ರ ಶಶಿಧರ್ ಬಲಿಪ ಕೃಷಿಕರು.

    ಯಕ್ಷಗಾನ ಕ್ಷೇತ್ರಕ್ಕೆ ಕೊಡುಗೆ

    ಬಲಿಪ ನಾರಾಯಣ ಭಾಗವತರು ೬೦ ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಡ್ರೆ ಜಠಾಧಾರಿ ಮೇಳವನ್ನು ಇವರು ಮೊದಲಿಗೆ ಆರಂಭಿಸಿದರು. ಯಕ್ಷಗಾನದ ೫೦ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪರಿಗಿದೆ. 30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಾರೆ. ಇವರನ್ನು ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ.ಬಲಿಪ ನಾರಾಯಣ ಭಾಗವತರು ಐದು ದಿನದ ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದು ಯಕ್ಷಗಾನದ ಇತಿಹಾಸದಲ್ಲೇ ಇದೊಂದು ಮಹತ್ವದ ಕೃತಿಯಾಗಿದೆ.

    ಪ್ರಶಸ್ತಿಗಳು
    ✓ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010
    ✓ ಸಾಮಗ ಪ್ರಶಸ್ತಿ 2012
    ✓ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜ್ಞಾನ ಪ್ರಶಸ್ತಿ' 2003 ✓ ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ 2002 ✓ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕರ್ನಾಟಕ ಶ್ರೀ ‘ಪ್ರಶಸ್ತಿ, 2003
    ✓ ಪದವೀಧರ ಯಕ್ಷಗಾನ ಮಂಡಳಿ ಮುಂಬಯಿ `ಅಗರಿ ಪ್ರಶಸ್ತಿ’ ೨೦೦೨
    ಶೇಣಿ ಪ್ರಶಸ್ತಿ, 2002
    ✓ ಕವಿ ಮುದ್ದಣ ಪುರಸ್ಕಾರ, 2003
    ✓ಕೂಡ್ಲು ಸುಬ್ರಾಯ ಶ್ಯಾನುಭೋಗ ಪ್ರಶಸ್ತಿ, 2003
    ✓ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವತಿಯಿಂದ ಬೆಂಗಳೂರಿನ ರಾಜ್ಯಮಟ್ಟದ ಸನ್ಮಾನ,2003
    ✓ಕರ್ನಾಟಕ ಸಂಘ ದುಬೈಯಲ್ಲಿ ಸನ್ಮಾನ, 2003
    ✓ಪಾರ್ತಿಸುಬ್ಬ ಪ್ರಶಸ್ತಿ
    ✓ಆಳ್ವಾಸ್ ನುಡಿಸಿರಿ ಪ್ರಶಸ್ತಿ

    Latest Posts

    ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಮೃತದೇಹ ಪತ್ತೆ..!

    ಕಡಬ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15).

    ಕಡಬ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು

    ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ...

    ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮಹಿಳೆಗೆ ಬಸ್ ಡಿಕ್ಕಿ – ಮಹಿಳೆ ಸಾವು

    ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ನಡೆದಿದೆ. ಬಸ್ ಪತ್ತೆ...

    ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ...

    Don't Miss

    BIGG NEWS : ಕೇಂದ್ರ ಸಚಿವರ ಮಹತ್ವದ ಘೋಷಣೆ, 6 ತಿಂಗಳಲ್ಲಿ ‘ಟೋಲ್ ಪ್ಲಾಜಾ’ ಬಂದ್, ‘GPS’ ವ್ಯವಸ್ಥೆ ಜಾರಿ.!

    ನವದೆಹಲಿ : ನೀವು ಹೆದ್ದಾರಿಯಲ್ಲಿ ನಿಮ್ಮ ಕಾರಿನೊಂದಿಗೆ ಪ್ರಯಾಣಿಸಿದ್ರೆ, ಟೋಲ್ ಪ್ಲಾಜಾದಲ್ಲಿ ಕಳೆದ ಸಮಯವನ್ನ ನೀವು ಇಷ್ಟಪಡುವುದಿಲ್ಲ. ಟೋಲ್ ಪ್ಲಾಜಾದಲ್ಲಿ ತೆಗೆದುಕೊಳ್ಳುವ ಸರಾಸರಿ ಸಮಯವನ್ನ ಕಡಿಮೆ ಮಾಡಲು ಸರ್ಕಾರವು ನಿರಂತರವಾಗಿ...

    ಕುಂಪಲ:ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

    ಉಳ್ಳಾಲ: ಮೊಬೈಲ್ ಶೋರೂಂವೊಂದರಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಅಕ್ಷಯ್ (25) ಆತ್ಮಹತ್ಯೆ...

    ಸುಳ್ಯ: ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ – ಮೂವರು ಕಾರ್ಮಿಕರ ಸಾವು

    ಸುಳ್ಯ : ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45),...

    ಉಜ್ವಲ ಯೋಜನೆಯಡಿ 12 ಸಿಲಿಂಡರ್ ವಿತರಣೆ -200 ರೂ. ಸಬ್ಸಿಡಿ.!

    ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್‌ಗಳಿಗೆ ಪ್ರತಿ ಸಿಲಿಂಡರ್‌ಗೆ ರೂ 200 ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನ...

    5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಮತ್ತೆ ಮುಂದೂಡಲು ಹೈಕೋರ್ಟ್ ನಕಾರ

    ಬೆಂಗಳೂರು: ರಾಜ್ಯದ 5 ಮತ್ತು 8 ನೇ ತರಗತಿಗಳಿಗೆ ಮಾರ್ಚ್ 27 ರಿಂದ ನಡೆಯಲಿರುವ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು...