ನೆಲ್ಯಾಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದ ಘಟನೆ ನೆಲ್ಯಾಡಿ ಸಮೀಪ ನಡೆದಿದ್ದು, 15 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಮಂಡ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿದ ಪರಿಣಾಮ 15 ಮಂದಿ ಗಾಯಗೊಂಡಿದ್ದಾರೆ.ಇನ್ನು ತಕ್ಷಣ ನೆಲ್ಯಾಡಿ ಅಶ್ವಿನಿ ಆಂಬ್ಯುಲೆನ್ಸ್ ಚಾಲಕ ಪ್ರಜ್ವಲ್ ಮತ್ತು ಅವರ ತಂಡ ಆಗಮಿಸಿ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.