ನವದೆಹಲಿ: ನೂತನ ಸಂಸತ್ ಭವನಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಮೇ ಅಂತ್ಯದ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಎರಡು ವರ್ಷಗಳ ಹಿಂದೆ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಈ ಕಟ್ಟಡದ ಕೆಲಸ ಕಾರ್ಯಗಳು ಇದೀಗ ಅಂತಿಮ ಹಂತದಲ್ಲಿದ್ದು, ಸ್ವಚ್ಛತೆ ಪ್ರಾರಂಭವಾಗಿದೆ ಎಂದು ತಿಳಿದುಬಂದಿದೆ.ಸೆಂಟ್ರಲ್ ವಿಸ್ತಾ ಯೋಜನೆ ಭಾಗವಾಗಿ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್ ಭವನ ಇದಾಗಿದೆ. ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ.ಹೊಸ ಕಟ್ಟಡದ ಉದ್ಘಾಟನೆಯ ಬಗ್ಗೆ ಇನ್ನೂ ಸರ್ಕಾರದಿಂದ ಯಾವುದೇ ಮಾಹಿತಿ ಇಲ್ಲವಾದರೂ , ಒಂಬತ್ತು ವರ್ಷಗಳ ಹಿಂದೆ 2014ರಲ್ಲಿ ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಮೇ 26 ರಂದು ಹೊಸ ರಚನೆಯ ಉದ್ಘಾಟನೆ ನಡೆಯಲಿದೆ ಎಂಬ ಸುದ್ದಿ ಕೇಳಿಬರುತ್ತಿದ್ದರೂ ಉದ್ಘಾಟನೆಯ ದಿನಾಂಕ ಇನ್ನೂ ದೃಢಪಡಿಸಿಲ್ಲ
©2021 Tulunada Surya | Developed by CuriousLabs