Tuesday, September 17, 2024
spot_img
More

    Latest Posts

    ನ್ಯೂ ಇಯರ್‌ ಪಾರ್ಟಿ, ಮೋಜಿನ ಕೂಟಕ್ಕೆ ಅನುಮತಿ ಕಡ್ಡಾಯ – ಕಮಿಷನರ್ ಶಶಿಕುಮಾರ್

    ಮಂಗಳೂರು: ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಅವರು ನಿರ್ದೇಶಿಸಿದ್ದಾರೆ.

    ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು ಈ ಬಗ್ಗೆ ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ಡಿಸೆಂಬರ್ 31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸಲು ಡಿಸೆಂಬರ್ 15ರ ಸಂಜೆ 5ಗಂಟೆಯೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ವರ್ಷಾಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾರ್ಯಕ್ರಮಗಳ ಧ್ವನಿವರ್ಧಕವನ್ನು ರಾತ್ರಿ 10 ಗಂಟೆಯೊಳಗೆ ಒಳಾವರಣದಲ್ಲಿ ಮಾತ್ರ ಮುಕ್ತಾಯಗೊಳಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಮದ್ಯವಿತರಣೆಗೆ ಅಬಕಾರಿಯಿಂದ ಅನುಮತಿ, ವಿದ್ಯಾರ್ಥಿಗಳಿಗೆ ಮದ್ಯಪಾನ ನಿಷೇಧ, ಬೈಕ ವೀಲಿಂಗ್ , ಹೆಣ್ಣುಮಕ್ಕಳನ್ನು, ಮಹಿಳೆಯರನ್ನು ಚುಡಾಯಿಸುವುದು, ಪಾರ್ಕಿಂಗ್ ವ್ಯವಸ್ಥೆ, ಹೊಸ ವರ್ಷಾಚರಣೆ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸುವವರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ಉಪಕರಣಗಳು, ತುರ್ತು ಚಿಕಿತ್ಸಾ ವಾಹನ ಹಾಗೂ ಇತರ ಮುಂಜಾಗ್ರತಾ ಕ್ರಮ ವಹಿಸಬೇಕು. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ವ್ಯವಸ್ಥಾಪಕರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss