ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಓಬಿಸಿ ಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದ್ದಾರೆ.

ಜಿಲ್ಲಾ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿ ಮಹೇಶ್ ಜೋಗಿ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ದಿನೇಶ್ ಉಚ್ಚಿಲ, ವಸಂತ್ ಹೊಸಬೆಟ್ಟು, ರಾಘವೇಂದ್ರ ರಾವ್, ಪುರುಷೋತ್ತಮ ಸಾಲ್ಯಾನ್ ಹಾಗೂ ಚಂದ್ರಹಾಸ ರಾವ್ ತಾರನಾಥ್ ಕಂಪ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಧಾನ ಕಾರ್ಯದರ್ಶಿಗಳಾಗಿ ಮೋನಪ್ಪ ದೇವಸ್ಯ ಶಶ್ದರ ಕಲ್ಮಂಜ ಮತ್ತು ಬಾಲಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕಾರ್ಯದರ್ಶಿಗಳಾಗಿ ಕಿಶೋರ್ ಬಾಬು, ಶ್ರೀಮತಿ ದೀಪಿಕಾ ಮನೋಜ್, ರವಿ ಸೋವುರು, ಸಂಪತ್ ಕುಕ್ಯನ್ ಮತ್ತು ಚಂದ್ರಶೇಖರ್ ಪನ್ನೆ ಅವರು ಜವಾಬ್ದಾರಿ ವಹಿಸಲಿದ್ದಾರೆ. ಖಜಾಂಚಿಯಾಗಿ ಸತೀಶ್ ದೇವಾಡಿಗ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಪ್ರಾಭಾರಿಯನ್ನಾಗಿ ಸೀತಾರಾಮ್ ಬೆಳಾಲ್ ರವರನ್ನು ನೇಮಕ ಮಾಡಲಾಗಿದೆ
ನೂತನ ಪದಾಧಿಕಾರಿಗಳು ಪಕ್ಷದ ಸಂಘಟನೆ ಬಲವರ್ಧನೆ, ಓಬಿಸಿ ಸಮುದಾಯದ ಹಕ್ಕುಗಳು ಹಾಗೂ ಅಭಿವೃದ್ಧಿ ಕುರಿತ ವಿಚಾರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಪಕ್ಷದ ತತ್ವ, ಸಿದ್ಧಾಂತ ಹಾಗೂ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದವರೆಗೆ ತಲುಪಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಅವರು ಕರೆ ನೀಡಿದ್ದಾರೆ.



