Saturday, April 20, 2024
spot_img
More

    Latest Posts

    ಓಮಿಕ್ರಾನ್‌ ಭೀತಿ; ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆಯ ಕ್ರಮ

    ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಹಾಗೂ ಇತ್ತೀಚೆಗೆ ಹೊರ ರಾಷ್ಟ್ರಗಳಲ್ಲಿ ವರದಿಯಾಗುತ್ತಿರುವ ಅದರ ರೂಪಾಂತರಿ ಓಮಿಕ್ರಾನ್‌ ತಡೆಗಟ್ಟುವಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವ ಮಂಗಳೂರು ಬಂದರು ಟ್ರಸ್ವ್‌ನ ಪಾತ್ರ ಅತಿ ಮುಖ್ಯವಾಗಿದ್ದು, ಕೋವಿಡ್‌ ಸೋಂಕಿತರ ಪತ್ತೆಗಾಗಿ ಅತ್ಯಂತ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

    ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ವರದಿ ಹೊಂದಿರಬೇಕು. ಕೋವಿಡ್‌ ತಪಾಸಣೆ ವೇಳೆ ಪಾಸಿಟಿವ್‌ ಕಂಡುಬಂದಲ್ಲಿ ಕೂಡಲೇ ಆಂಬ್ಯುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು. ಸೋಂಕಿತರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಜವಾಬ್ದಾರಿಯನ್ನು ಏರ್‌ಪೋರ್ಟ್‌ ಮ್ಯಾನೇಜರ್‌ಗೆ ನೀಡಲಾಗಿದೆ.

    ನವ ಮಂಗಳೂರು ಬಂದರು ಟ್ರಸ್ಟ್‌ಗೆ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಹಡಗುಗಳಲ್ಲಿ ಆಗಮಿಸುವ ಪ್ರಯಾಣಿಕರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಬೇಕು. ಎಷ್ಟು ಪ್ರಯಾಣಿಕರು, ಎಷ್ಟು ಹಡಗುಗಳು ಇಲ್ಲಿಗೆ ಬಂದವು. ಆ ವಿವರಗಳನ್ನು ಪ್ರತಿ ವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಗೆ ಸಲ್ಲಿಸಲು ಅಧಿಕಾರಿಗಳು ಸೂಚಿಸಿದ್ದಾರೆ.

    ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಡ್‌ ವ್ಯಾಕ್ಸಿನ್‌ನ ಮೊದಲ ಹಾಗೂ ಎರಡನೇ ಡೋಸ್‌ ಪಡೆದುಕೊಂಡಿರುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಕೂಡಲೇ ಮಾಹಿತಿ ಒದಗಿಸಬೇಕು. ಸರಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರು ಕೂಡ ಕೋವಿಡ್‌ ವ್ಯಾಕ್ಸಿನ್‌ ಪಡೆದಿರಬೇಕು. ಪಡೆಯದವರ ಅನುಕೂಲಕ್ಕಾಗಿ ಸಮೀಪದಲ್ಲಿಯೇ ವ್ಯಾಕ್ಸಿನ್‌ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

    ಮಂಗಳೂರು ಮಹಾನಗರ ಪಾಲಿಕೆಗೆ ಆಗಮಿಸುವ ಸಾರ್ವಜನಿಕರು ಕೋವಿಡ್‌ನ ಮೊದಲ ಹಾಗೂ ಎರಡನೇ ಡೋಸ್‌ ಪಡೆದಿರುವ ಬಗ್ಗೆ ಮಾಹಿತಿ ನೀಡಬೇಕು. ಆರ್‌ಟಿಒ ಕಚೇರಿಗೆ ಸಾಕಷ್ಟು ಜನರು ಪ್ರತಿನಿತ್ಯ ಬರುತ್ತಾರೆ. ಅವರು ಕೂಡ ವ್ಯಾಕ್ಸಿನ್‌ ಪಡೆದಿರುವ ಮಾಹಿತಿ ನೀಡಬೇಕು. ಕೇರಳ ಹಾಗೂ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರ ವಾಹನಗಳನ್ನು ತಪಾಸಣೆ ಮಾಡಬೇಕು. ವಾಹನಗಳಲ್ಲಿರುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ವರದಿ ಇಟ್ಟುಕೊಂಡಿರಬೇಕು. ಪರಿಶೀಲನೆ ಸಂದರ್ಭದಲ್ಲಿ ಈ ವರದಿ ನೀಡದಿದ್ದರೆ ಅಂತಾರಾಜ್ಯ ಸಾರಿಗೆಯನ್ನು ನಿರ್ಬಂಧಿಸುವ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರು ಆರ್‌ಟಿಪಿಸಿಆರ್‌ ರಿಪೋರ್ಟ್‌ ಹೊಂದಿರಬೇಕು. ಕೋವಿಡ್‌ನ ಎರಡು ಡೋಸ್‌ ಲಸಿಕೆ ಪಡೆದಿರಬೇಕು. ಪ್ರತಿನಿತ್ಯ ಕೇರಳದಿಂದ ಇಲ್ಲಿಗೆ ಆಗಮಿಸುವವರು 14 ದಿನಗಳಿಗೊಮ್ಮೆ ಕೋವಿಡ್‌ ತಪಾಸಣೆ ಮಾಡಿಸಿಕೊಂಡು, ವರದಿ ಇಟ್ಟುಕೊಂಡಿರಬೇಕು. ತಪಾಸಣೆ ವೇಳೆ ಅದನ್ನು ಹಾಜರುಪಡಿಸಲು ಸೂಚಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss