Thursday, April 18, 2024
spot_img
More

    Latest Posts

    ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ : ಸಚಿವ ಡಾ. ಸುಧಾಕರ್

    ಬೆಂಗಳೂರು: ಕರ್ನಾಟಕದಲ್ಲಿ ಲಸಿಕೆ ವಿತರಣೆ ದಿನೇ ದಿನೆ ಹೆಚ್ಚಳವಾಗುತ್ತಿದ್ದು, ಇದುವರೆಗು 1.96 ಕೋಟಿ ಲಸಿಕೆ ವಿತರಿಸಲಾಗಿದೆ. ಸದ್ಯ ಲಸಿಕೆ ಅಭಿಯಾನದಲ್ಲಿ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

    ಈ ಕುರಿತು ಟ್ವಿಟರ್ ನಲ್ಲಿ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಒಂದೇ ದಿನದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್‌ ಲಸಿಕೆ ವಿತರಿಸಲಾಗಿದೆ. ಆ ಮೂಲಕ ದೇಶದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ.

    ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಡಾ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss