ಮಂಗಳೂರು: ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ‘ಅಕ್ಷರ ಸಂತ’ ಹರೇಕಳ ಹಾಜಬ್ಬ ಅವರು ನವದೆಹಲಿ ಪ್ರಯಾಣ ಬೆಳೆಸಿದ್ದಾರೆ. ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹರೇಕಳ ಹಾಜಬ್ಬ ಅವರಿಗೆ ಕೇಂದ್ರ ಸರ್ಕಾರವು 2020 ರಲ್ಲಿ ಪದ್ಮಶ್ರೀ ಪ್ರಶಸ್ತಿ ಘೋಷಿಸಿತ್ತು. ಅಕ್ಷರಾಭ್ಯಾಸ ಇಲ್ಲದಿದ್ದರೂ ತನ್ನೂರಿಗೆ ಶಾಲೆ ನಿರ್ಮಾಣಕ್ಕಾಗಿ ಪಟ್ಟ ಪರಿಶ್ರಮಕ್ಕೆ ಕಿತ್ತಲೆ ವ್ಯಾಪಾರಿ ಹರೇಕಳ ಹಾಜಬ್ಬ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ ಕೊರೊನಾ ಕಾರಣದಿಂದ ಕಳೆದ ವರ್ಷ ನೀಡಬೇಕಿದ್ದ ಪದ್ಮಶ್ರೀ ಪ್ರಶಸ್ತಿಯನ್ನು 2021ರ ನ. 8 ರಂದು ನೀಡಲಾಗುತ್ತಿದೆ.
ಕೇಂದ್ರ ಸರ್ಕಾರದ ಆಹ್ವಾನದಂತೆ ಹರೇಕಳ ಹಾಜಬ್ಬ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು ನಾಳೆ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ. ತನ್ನ ಮುಗ್ಧ ಸ್ವಭಾವ ಮತ್ತು ಸರಳತೆಯಿಂದ ಜನರ ಪ್ರೀತಿಗೆ ಪಾತ್ರರಾಗಿರುವ ಹರೇಕಳ ಹಾಜಬ್ಬ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
