Friday, March 29, 2024
spot_img
More

    Latest Posts

    ಹೃದಯಾಘಾತದಿಂದ ಕೊನೆಯುಸಿರೆಳೆದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ

    ಬೆಂಗಳೂರು: ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಯಲಯದ ಅಧ್ಯಕ್ಷ ಡಾ. ಭುಜಂಗ ಶೆಟ್ಟಿ ಅವರು ಬೆಂಗಳೂರಿನ ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

    ಅವರಿಗೆ 69 ವರ್ಷ ವಯಸ್ಸಾಗಿತ್ತು. ನಿನ್ನೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದ ಡಾ. ಭುಜಂಗ ಶೆಟ್ಟಿ ಅವರಿಗೆ ಸಂಜೆಯ ವೇಳೆ ತೀವ್ರ ಹೃದಯಾಘಾತ ಉಂಟಾಗಿತ್ತು. ಕೂಡಲೇ ಮನೆ ಮಂದಿ ಅವರನ್ನು ಚಿಕಿತ್ಸೆಗಾಗಿ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಾ ಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು. ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss