ಮಂಗಳೂರು: ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ನಗರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಎಲ್ಲ ರಾಜಕೀಯ ಮುಖಂಡರುಗಳು, ಧಾರ್ಮಿಕ ಮತ್ತು ಶೈಕ್ಷಣಿಕ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಎಲ್ಲ ಸಮುದಾಯದ ಮುಖಂಡರುಗಳೊಂದಿಗೆ ಜುಲೈ 9 ರಂದು ಗೃಹ ಸಚಿವ ಪರಮೇಶ್ವರ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.

ವೇದಿಕೆಯಲ್ಲಿ ವಿಧಾನಸಭಾಧ್ಯಕ್ಷರಾದ ಯುಟಿ ಖಾದರ್ , ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ , ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಕೆ.ಅರುಣ್ ಉಪಸ್ಥಿತರಿದ್ದರು.



