ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.
ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ. ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.