Tuesday, September 17, 2024
spot_img
More

    Latest Posts

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ ಗೊತ್ತಾಗಿದೆ. ಹೀಗಾಗಿ ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು. ಸಂದೇಹಾಸ್ಪದ ಚಟುವಟಿಕೆ ಕಂಡ ಕೂಡಲೇ ಜಾಗೃತರಾಗಬೇಕು. ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.

    ಉತ್ಥಾನ ದ್ವಾದಶಿ ಬಳಿಕ ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವ, ನಾಗಮಂಡಲದಂತಹ ಹಲವಾರು ಉತ್ಸವಗಳು ನಡೆಯುತ್ತವೆ. ಜನಸಂದಣಿ ಹೆಚ್ಚಿರುವ ಸಮಾರಂಭ ನಡೆಯುತ್ತವೆ. ಇಂತಹ ಸ್ಥಳಗಳಲ್ಲಿ ಅನಾಹುತ ನಡೆದಲ್ಲಿ ಸಮಾಜಕ್ಕೆ ದೊಡ್ಡ ಹಾನಿ. ಪ್ರತಿಯೊಬ್ಬರೂ ಸದಾ ಜಾಗೃತರಾಗಿಬೇಕು .ಹಿಂದೂ ಸಂಕೇತ ಬಳಸಿ ಇಂತಹ ಕೃತ್ಯ ಮಾಡುವುದನ್ನು ನೋಡುತ್ತಿದ್ದೇವೆ. ನಿಮ್ಮ ಮೊಬೈಲ್ ಅಥವಾ ದಾಖಲೆಗಳು ಕಳೆದುಹೋದರೆ ಸಂಬಂಧಪಟ್ಟ ಇಲಾಖೆಗೆ ತಿಳಿಸಿ. ಇಲ್ಲವಾದರೆ ಇಂತಹ ಸಂದರ್ಭದಲ್ಲಿ ಸಂದೇಹಕ್ಕೆ ಒಳಗಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss