ಮಂಗಳೂರು: ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 11ರಂದು ಬೆಳಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಫೋನ್ ಮೂಲಕ ನೇರವಾಗಿ ಪೊಲೀಸ್ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಪರಿಹಾರ ಕಂಡುಕೊಳ್ಳಬಹುದು.ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ:0824-22208010824-2220830. ಫೋನ್-ಇನ್ ಕಾರ್ಯಕ್ರಮದ ನಂತರ 11.00 ಗಂಟೆಯಿಂದ 12.00 ಗಂಟೆಯವರೆಗೆ ಪೊಲೀಸ್ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಸಭೆಯಲ್ಲಿ ತಿಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ ಎಂದು ಕಮೀಷನರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
©2021 Tulunada Surya | Developed by CuriousLabs