Monday, November 29, 2021

ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ವ್ಯಕ್ತಿ ಸಾವು!

ಕಾಪು:ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ...
More

  Latest Posts

  ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

  ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

  ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

  ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

  ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

  ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

  ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

  ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

  ಪುತ್ತೂರು: ಫೋಟೋಗ್ರಾಫರ್ ಕೊಲೆ ಪ್ರಕರಣ-ಅರಣ್ಯದಲ್ಲಿ ಶವ ಪತ್ತೆ

  ಪುತ್ತೂರು: ಕೃಷಿ ಭೂಮಿಯನ್ನು ನೋಡಲು ಬಂದ ಫೋಟೋಗ್ರಾಫರ್ ಒಬ್ಬರನ್ನು ಸಂಬಂಧಿಕರೇ ಕೊಲೆ ಮಾಡಿ ಕಾಡಿನ ಮಧ್ಯೆ ಹೂತು ಹಾಕಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಗುಳಿ ಎಂಬಲ್ಲಿ ನಡೆದಿದೆ.

  ಮೈಸೂರಿನ ಸುಬ್ರಹ್ಮಣ್ಯ ನಗರದ ಜಗದೀಶ್(58) ಕೊಲೆಯಾದ ವ್ಯಕ್ತಿಯಾಗಿದ್ದು, ನವಂಬರ್ 17ರಂದು ಪುತ್ತೂರಿನ ಕುಂಜೂರುಪಂಜ ಎಂಬಲ್ಲಿರುವ ತನ್ನ ಕೃಷಿಭೂಮಿಯನ್ನು ನೋಡಲು ಮೈಸೂರಿನಿಂದ ಪುತ್ತೂರಿಗೆ ಬಂದಿದ್ದರು.

  ಈ ಕೃಷಿಭೂಮಿಯನ್ನು ಮುಗುಳಿ ನಿವಾಸಿ ವಿಲಿಯರ್ಸ್ ಸುಬ್ಬಯ್ಯ ಅಲಿಯಾಸ್ ಬಾಲಕೃಷ್ಣ ರೈ ಎಂಬವರ ಜೊತೆ ಸೇರಿ ಸುಮಾರು ಎರಡೂವರೆ ಎಕರೆ ಜಾಗ ಖರೀದಿಸಿದ್ದರು. ಈ ಜಾಗದ ಖರೀದಿಯ ಬಳಿಕ ಜಾಗವನ್ನು ನೊಂದಣಿ ಮಾಡಲು ಜಗದೀಶ್ ಸಂಬಂಧಿ ಬಾಲಕೃಷ್ಣ ರೈ ಹಿಂದೇಟು ಹಾಕಿದ್ದರು. ಪುತ್ತೂರಿನ ಆರ್ಯಾಪು ಗ್ರಾಮದ ಕುಂಜೂರು ಪಂಜದಲ್ಲಿ ಜಮೀನನ್ನು ಖರೀದಿಸಿರುವ ಜಗದೀಶ್ ಆ ಜಾಗದಲ್ಲಿ ಮನೆ ನಿರ್ಮಿಸಿ ಪುತ್ತೂರಿನಲ್ಲೇ ಸೆಟಲ್ ಆಗಲು ತೀರ್ಮಾನಿಸಿದ್ದರು. ಈ ನಡುವೆ ಈ ಜಾಗವನ್ನು ಜಗದೀಶ್ ರೈ ಅವರ ಗಮನಕ್ಕೆ ತಾರದೆ ಬಾಲಕೃಷ್ಣ ರೈ ತಮ್ಮ ಹೆಸರಿಗೆ ಮಾಡಿಕೊಂಡು ಮಾರಾಟ ಮಾಡಲು ತೀರ್ಮಾನಿಸಿದ್ದರು. ಈ ವಿಚಾರದ ಬಗ್ಗೆ ಮಾತುಕತೆ ನಡೆಸಲು ಜಗದೀಶ್ ನವಂಬರ್ 17 ರಂದು ಮೈಸೂರಿನಿಂದ ಪುತ್ತೂರಿಗೆ ಬಂದಿದ್ದರು. ಪುತ್ತೂರಿಗೆ ಬಂದ ಬಳಿಕ ಜಗದೀಶ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅನುಮಾನಗೊಂಡ ಜಗದೀಶ್ ಮನೆಯವರು ಮೈಸೂರಿನಲ್ಲಿ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಈ ನಡುವೆ ಜಗದೀಶ್ ನಾಪತ್ತೆಯ ವಿಚಾರವಾಗಿ ಪೊಲೀಸರು ಬಾಲಕೃಷ್ಣ ರೈ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ಆರೋಪಿ ಬಾಲಕೃಷ್ಣ ರೈ ಪೊಲೀಸರಿಗೆ ಜಗದೀಶ್ ನವಂಬರ್ 18ರಂದೇ ಮೈಸೂರಿಗೆ ವಾಪಾಸು ಹೋಗಿದ್ದಾರೆ, ಹಾಗೂ ಅವರನ್ನು ಮಾರುತಿ ಓಮ್ನಿ ಕಾರಿನಲ್ಲೇ ತಾನೇ ಸುಳ್ಯಕ್ಕೆ ಕಳುಹಿಸಿರುವುದಾಗಿ ಮಾಹಿತಿ ನೀಡಿದ್ದರು.
  ಈ ಹಿನ್ನಲೆಯಲ್ಲಿ ಪೊಲೀಸರು ಜಗದೀಶ್ ಅವರ ಪತ್ತೆಗಾಗಿ ಶೋಧ ನಡೆಸಿದ್ದರು. ಈ ನಡುವೆ ಆರೋಪಿ ಬಾಲಕೃಷ್ಣ ರೈ ನೀಡಿದ ಮಾಹಿತಿಯನ್ನು ಪರಿಶೀಲಿಸಿದ ಪೊಲೀಸರಿಗೆ ಆರೋಪಿಯು ಜಗದೀಶ್ ಅವರನ್ನು ಮಾರುತಿ ಒಮ್ನಿ ಕಾರಿನಲ್ಲಿ ಸುಳ್ಯಕ್ಕೆ ಕಳುಹಿಸಿದ ಕುರಿತ ಯಾವುದೇ ಕುರುಹು ದೊರೆತಿಲ್ಲ. ಪುತ್ತೂರಿನ ಕಾವು ಎಂಬಲ್ಲಿ ಕಾರು ನಿಲ್ಲಿಸಿ ಸುಳ್ಯಕ್ಕೆ ಕಳುಹಿಸಿರುವುದಾಗಿ ಹೇಳಿಕೆ ನೀಡಿರುವುದನ್ನು ಪರಿಶೀಲಿಸಿದ ಸ್ಥಳೀಯ ಪೊಲೀಸರು ಕಾವಿನ ಮಸೀದಿಯೊಂದರ ಸಿಸಿ ಕ್ಯಾಮಾರಾವನ್ನು ಪರಿಶೀಲಿಸಿದ ಸಂದರ್ಭದಲ್ಲಿ ಆರೋಪಿ ಹೇಳಿದ ಸಮಯದಲ್ಲಿ ಇಂಥಹ ಯಾವುದೇ ಘಟನೆ ನಡೆದಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ ಅನುಮಾನದ ಹಿನ್ನಲೆಯಲ್ಲಿ ಆರೋಪಿ ಬಾಲಕೃಷ್ಣ ರೈಯನ್ನು ಸೂಕ್ತ ತನಿಖೆ ನಡೆಸಿದ ಸಂದರ್ಭದಲ್ಲಿ ಆರೋಪಿಯು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತನ್ನ ಮಗ ಹಾಗೂ ಇನ್ನೊಬ್ಬ ಯುವಕನ ಜೊತೆ ಸೇರಿಕೊಂಡು ಜಗದೀಶ್ ಅವರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಪೋಲೀಸರು ಬಾಲಕೃಷ್ಣ ರೈ, ಆತನ ಮಗ ಪ್ರಶಾಂತ್ ರೈ ಹಾಗೂ ಜೀವನ್ ಗೌಡ ಎಂಬ ಮೂವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸಂಪ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

  ಕೊಲೆ ಬಳಿಕ ರಕ್ಷಿತಾರಾಣ್ಯದಲ್ಲಿ ಹೂತು ಹಾಕಿದ್ದರು
  ಆರೋಪಿಗಳು ಸುತ್ತಿಗೆಯಿಂದ ಜಗದೀಶ್ ತಲೆಗೆ ಹೊಡೆದು ಕೊಲೆ ನಡೆಸಿರುವ ಸಾಧ್ಯತೆಯಿದ್ದು, ಈ ಸಂಬಂಧ ಪೊಲೀಸರು ಕೊಲೆಗೆ ಬಳಸಿದ ಮಾರಕಾಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ನಡೆಸಿದ ಬಳಿಕ ಆರೋಪಿಗಳು ಜಗದೀಶ್ ಶವವನ್ನು ಮುಗುಳಿ ರಕ್ಷಿತಾರಣ್ಯದಲ್ಲಿ ಮಣ್ಣಿನಲ್ಲಿ ಹೂತಿದ್ದು, ಯಾರಿಗೂ ಸಂಶಯ ಬಾರದ ರೀತಿಯಲ್ಲಿ ರಾತ್ರೋರಾತ್ರಿ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ. ಜಗದೀಶ್ ಅವರನ್ನು ಕೊಲೆ ನಡೆಸಿದ ಬಳಿಕ ಆರೋಪಿಗಳು ಕೊಲೆಯ ಬಗ್ಗೆ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಜಗದೀಶ್ ಅವರ ಮೊಬೈಲ್ ಪೋನನ್ನು ನವಂಬರ್ 18ರಂದೇ ಜಗದೀಶ್ ಮನೆಯ ಪಕ್ಕದಲ್ಲೇ ಎಸೆದು ಹೋಗಿದ್ದು, ಪೊಲೀಸರು ಮೊಬೈಲ್ ನ ಲೊಕೇಶನ್ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಗದೀಶ್ ಮೊಬೈಲ್ ಮೈಸೂರಿನಲ್ಲೇ ಇರುವುದು ಬೆಳಕಿಗೆ ಬಂದಿದೆ. ಇದರಿಂದಾಗಿ ಆರೋಪಿಗಳ ಬಗ್ಗೆ ಪೊಲೀಸರಿಗೆ ಮೊದಲಿಗೆ ಯಾವುದೇ ಸಂದೇಹ ಬಂದಿರಲಿಲ್ಲ.

  Latest Posts

  ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

  ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

  ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

  ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

  ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

  ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

  ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

  ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

  Don't Miss

  ಮಂಗಳೂರು: ‘ಮಾಮ್‌’ ನೂತನ ಪದಾಧಿಕಾರಿಗಳ ಆಯ್ಕೆ

  ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

  ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

  ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

  ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

  ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

  ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

  ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

  ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

  ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....