ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಯಾತ್ರಾರ್ಥಿಯ ಕಾರಿನ ಗಾಜು ಒಡೆದು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ ಎಂಬವರು ಆ.26ರಂದು ಬೆಳಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು. ಕಾರನ್ನು ಧರ್ಮಸ್ಥಳ ಅಣ್ಣಪ್ಪ ಬೆಟ್ಟದ ಸಮೀಪ ಲಾಕ್ ಮಾಡಿ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಕಳ್ಳತನ ನಡೆದಿದೆ.ದರ್ಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ಲಾಸನ್ನು ಒಡೆದಿರುವುದು ಕಂಡು ಬಂದದ್ದು ಪರಿಶೀಲಿಸಿದಾಗ ಕಾರಿನಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ ಅಂದಾಜು 1,96,000 ರೂ. ಮೌಲ್ಯದ 40 ಗ್ರಾಂ ತೂಕದ ಮಾಂಗಲ್ಯ ಸರ, 4,000 ರೂ. ಮೌಲ್ಯದ 1 ಮೊಬೈಲ್ ಫೋನ್ ಕಳವಾಗಿದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ 2,00,000 ರೂ. ಆಗಿರಬಹುದು ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs