ಮಂಗಳೂರು: ಎನ್ ಎನ್ ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಂಡಿದೆ.
ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಪಿಲಿ ತುಳು ಸಿನಿಮಾದ ಬಿಡುಗಡೆ ನಡೆಯಿತು.
ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್ ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಉಡುಪಿಯಲ್ಲಿ ಕಲ್ಪನಾ, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಮೂಡಬಿದ್ರೆಯಲ್ಲಿ ಅಮರಶ್ರೀ, ಕಾಸರಗೋಡ್ ನಲ್ಲಿ ಕೃಷ್ಣ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಅರುಣಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್ ನಲ್ಲಿ ಪಿಲಿ ಸಿನಿಮಾ ತೆರೆ ಕಂಡಿದೆ.
ಭರತ್ ಭಂಡಾರಿಯವರು ನಾಯಕ ನಟನಾಗಿ ಹಾಗೂ ನಾಯಕಿಯಾಗಿ.ಸ್ವಾತಿ ಶೆಟ್ಟಿ. ಚಿತ್ರದಲ್ಲಿ ಅಭಿನಯಿಸಿದ್ದಾರೆ,
ಛಾಯಾಗ್ರಹಣ ಮತ್ತು ನಿರ್ದೇಶನ ಮಯೂರ್ ಆರ್ ಶೆಟ್ಟಿ, ಆತ್ಮಾನಂದ ರೈ ನಿರ್ಮಾಪಕರಾಗಿದ್ದು, ಭರತ್ರಾಮ್ ರೈ ಸಹ ನಿರ್ಮಾಪಕರಾಗಿದ್ದಾರೆ, ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಪಟ್ಲ ಸತೀಶ್ ಶೆಟ್ಟಿಯವರ ಕಂಠ ಸಿರಿಯಲ್ಲಿ ಶೀರ್ಷಿಕೆ ಗೀತೆ ಮೂಡಿಬಂದಿದೆ.
ಸಮಾರಂಭದಲ್ಲಿ ಖ್ಯಾತ ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಕೆ ಪಾಂಡೇಶ್ವರ, ಕ್ಯಾಟ್ಕದ ಮಾಜಿ ಅಧ್ಯಕ್ಷ ಮೋಹನ್ ಕೊಪ್ಪಲ, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ನಿರ್ದೇಶಕ ಮಯೂರ್ ಶೆಟ್ಟಿ, ನಿರ್ಮಾಪಕರಾದ ಆತ್ಮಾನಂದ ರೈ, ನಾಯಕ ನಟ ಭರತ್ ಭಂಡಾರಿ, ನಾಯಕಿ ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಒಂದು ಗಟ್ಟಿತನವಿರುವ ಕಥೆಯ ಜೊತೆಗೆ, ಕೌಟುಂಬಿಕ ಮನರಂಜನೆ, ಹಾಸ್ಯ, ಪ್ರೀತಿ ಪ್ರೇಮ, ಸುಂದರ ಹಾಡುಗಳ ಜೊತೆಗೆ ಮೈ ನವಿರೇಳಿಸುವ ಸಾಹಸ ಮತ್ತು ಕತೆಯಲ್ಲಿ ಕೊನೆವರೆಗೂ ಸಾಗುವ ನಿಗೂಢತೆ ಇವೆಲ್ಲವೂ ಪ್ರೇಕ್ಷಕರಿಗೆ ಪರಿಪೂರ್ಣ ಮನರಂಜನೆಯನ್ನು ನೀಡಲಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ಮಯೂರ್ ಶೆಟ್ಟಿ. ವಿಜಯ್‌ಕುಮಾರ್ ಕೊಡಿಯಾಲ್‌ಬೈಲ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತ್ರಿಷಾ ಶೆಟ್ಟಿ, ಕೃತಿ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್, ಸ್ವರಾಜ್ ಶೆಟ್ಟಿ, ಸಂತೋಷ್ ಶೆಟ್ಟಿ, ರೂಪ ಡಿ ಶೆಟ್ಟಿ, ನಮಿತಾ ಕೂಳೂರು, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್‌ಶೆಟ್ಟಿ ಮಾಣಿಬೆಟ್ಟು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ.
