Thursday, April 25, 2024
spot_img
More

    Latest Posts

    ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ಆಮದು,ಮಾರಾಟ ನಿಷೇಧ

    ಹಾವೇರಿ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆನಿಯಮಗಳು, 2016ರ ನಿಯಮ 4(2)ರ ಪ್ರಕಾರ (ತಿದ್ದುಪಡಿದಂತೆ), ಪ್ಲಾಸ್ಟಿಕ್ ಸೇರಿದಂತೆ ಪಾಲಿಸ್ರೈರೀನ್ ಮತ್ತು ವಿಸ್ತರಿತ ಪಾಲಿಸ್ರೈರೀನ್ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್(SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು 1 ಜುಲೈ 2022 ರಿಂದ ನಿಷೇಧಿಸಲಾಗಿದೆ ಎಂದು ಮಾಲಿನ್ಯ ನಿಯಂತ್ರಣ ಹಾಗೂ ಪರಿಸರ ಅಧಿಕಾರಿ ಸುಧಾ ಸೌಮ್ಯಲತಾ ಎಂ.ಕೆ. ಅವರು ತಿಳಿಸಿದ್ದಾರೆ.

    ಪ್ಲಾಸ್ಟಿಕ್ ಸ್ಟಿಕ್‍ಗಳೊಂದಿಗೆ ಇಯರ್ ಬಡ್‍ಗಳು, ಬಲೂನ್‍ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‍ಗಳು, ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್‍ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ರೈರೀನ್(ಥರ್ಮಾಕೋಲ್), ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಕಪ್‍ಗಳು ಮತ್ತು ಲೋಟಗಳು, ಫೋರ್ಕ್‍ಗಳು, ಚಮಟಗಳು, ಚಾಕುಗಳು, ಟ್ರೇಗಳಂತಹ ಕಟ್ಲರಿಗಳು, ಸ್ವೀಟ್ ಬಾಕ್ಸ್‍ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಮ್‍ಗಳು, ಆಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್‍ಗಳು, 100 ಮೈಕ್ರಾನ್‍ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ Pಗಿಅ ಬ್ಯಾನರ್‍ಗಳು, ಪ್ಲಾಸ್ಟಿಕ್ ಸ್ಟಿರರ್‍ಗಳನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (ಒoಇಈ& ಅಅ) ಅಧಿಸೂಚನೆಯಲ್ಲಿನಿರ್ದಿಷ್ಟಪಡಿಸಿದ ಟೈಮ್‍ಲೈನ್‍ಗಳಪ್ರಕಾರ ಮೇಲಿನ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು,ಚಿಲ್ಲರೆ ವ್ಯಾಪಾರಿಗಳು,ಅಂಗಡಿ ಮಾಲೀಕರು, ಇ-ಕಾಮರ್ಸ್‍ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು(ಮಾಲ್‍ಗಳು,ಮಾರುಕಟ್ಟೆ ಸ್ಥಳ,ಶಾಪಿಂಗ್ ಕೇಂದ್ರಗಳು, ಸಿನಿಮಾಮನೆಗಳು, ಪ್ರವಾಸೋದ್ಯಮ ಸ್ಥಳಗಳು, ಶಾಲೆಗಳು, ಕಾಲೇಜುಗಳಲ್ಲಿ, ಕಚೇರಿ ಸಂಕೀರ್ಣಗಳು, ಆಸ್ಪತ್ರೆ, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಎಗ ಏಕಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆಮತ್ತು ಬಳಕೆಯನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

    ಜೂನ್ 30, 2022 ರೊಳಗೆ ಮೇಲೆ ತಿಳಿಸಲಾದ SUP ವಸ್ತುಗಳ ಶೂನ್ಯ ದಾಸ್ತಾನುಗಳನ್ನು ಖಚಿತಪಡಿಸಿಕೊಳ್ಳಲು ಸಂಬಂಧಿಸಿದ ಘಟಕಗಳಿಂದಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲ ಇ-ಕಾಮರ್ಸ್ ಕಂಪನಿಗಳ ವೆಬ್‍ಸೈಟ್‍ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳಮಾರಾಟ ಮಾರಾಟ ಮತ್ತು ಪ್ರದರ್ಶನ, ಜಾಹೀರಾತುಗಳನ್ನು ಕೂಡ 1 ಜುಲೈ 2022ರಿಂದಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

    ಈ ಆದೇಶವನ್ನು ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳಾದ ಮಾಲ್‍ಗಳು,ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರಗಳು, ಸಿನಿಮಾ ಮನೆಗಳು, ಪ್ರವಾಸಿ ಸಂಸ್ಥೆಗಳು, ಶಾಲೆಗಳು, ಕಾಲೇಜುಗಳು,ಕಚೇರಿಗಳು, ಆಸ್ಪತ್ರೆಗಳು ಮತ್ತು ಇತರ ಸಂಸ್ಥೆಗಳು ಉಲ್ಲಂಘಿಸಿದರೆ ಪರಿಸರ ಸಂರಕ್ಷಣೆಕಾಯ್ದೆ 1986ರಡಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ವಶಪಡಿಸಿಕೊಳ್ಳುವ ಮತ್ತು ಅಂತಹ ಸಂಸ್ಥೆಗಳನ್ನು ಮುಚ್ಚಲು ಆದೇಶವನ್ನು ನೀಡಲಾಗುವುದು. ಪ್ರತಿ ಟನ್‍ಗೆ ರೂ.ಐದು ಸಾವಿರ ದಂಡ ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss