Thursday, September 19, 2024
spot_img
More

    Latest Posts

    ಕೊರೋನಾ ಸೋಂಕು ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ: ಕಮಿಷನರ್

    ಮಂಗಳೂರು : ಮಂಗಳೂರಿನಲ್ಲೂ ಕೊರೋನಾ ಸೋಂಕು ತೀವ್ರ ಹೆಚ್ಚಳ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾದ ಲಾಕ್ ಡೌನ್ ವೇಳೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದವರ ವಿರುದ್ದ ಹಲವು ಪ್ರಕರಣ ದಾಖಲಾಗಿದೆ ಎಂದು ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

    ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು ಎರಡು ಸಾವಿರಕ್ಕೂ ಅಧಿಕ ಮಾಸ್ಕ್ ನಿಯಮ ಉಲ್ಲಂಘನೆ ಹಾಗೂ 150 ಕ್ಕೂ ಅಧಿಕ ಎಫಿಡಮಿಕ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, 300 ಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಜನರು ಉತ್ತಮ ಸ್ಪಂದನೆ ನೀಡುತ್ತಿದ್ದು, ಲಾಕ್ ಡೌನ್ ವೇಳೆ ಅಂಗಡಿ ಮುಂಗಟ್ಟುಗಳನ್ನು ತೆರೆದರೆ ಪ್ರಕರಣ ದಾಖಲಿಸಲಾಗುವುದು. ನಗರದಲ್ಲಿ ರಾತ್ರಿ ಹೊತ್ತು ಮಿಡ್ನೈಟ್ ಬಿಸ್ಟ್ರೋ ಮಳಿಗೆ ತೆರೆದು ಜನರನ್ನು ಸೇರಿಸಿ ಸಿಗರೇಟ್ ಮಾರಾಟ ಮಾಡುವ ಬಗ್ಗೆ ಮಾಹಿತಿ ಲಬ್ಯವಾಗಿದೆ. ಇದರ ವಿರುದ್ಧ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಮಳಿಗೆಯ ಮುಖ್ಯಸ್ಥರ ಮೇಲೆ ಎಫಿಡಮಿಕ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ

    advartisement

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss