ಬೆಂಗಳೂರು;ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ ಓರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಮೃತರು.ಇವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಮಂಜುನಾಥ್ ಕಳೆದ ಜನವರಿಯಿಂದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ನಿನ್ನೆ ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹುಟ್ಟೂರು ಹಾಸನಕ್ಕೆ ಇನ್ಸ್ಪೆಕ್ಟರ್ ಮಂಜುನಾಥ್ ಮೃತದೇಹ ಕೊಂಡೊಯ್ಯಲಾಗಿದ್ದು, ಹಾಸನ ಜಿಲ್ಲೆಯ ಉದ್ದೂರಿನಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ.
ಮಂಜುನಾಥ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಆರೋಗ್ಯದಲ್ಲಿ ತೀರಾ ಏರುಪೇರಾಗುತ್ತಿದ್ದರಿಂದ ಚಿಕಿತ್ಸೆಗಾಗಿ ಸಾವಿಗೂ ಮುನ್ನ 15 ದಿನ ರಜೆ ತೆಗೆದುಕೊಂಡಿದ್ದರು.
ದಕ್ಷ ಹಾಗೂ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುವ ಮೂಲಕ ಹೆಸರುಗಳಿಸಿದ್ದ ಮಂಜುನಾಥ್ ಪೀಪಲ್ಸ್ ಮ್ಯಾನ್ ಎಂದು ಹೆಸರು ಪಡೆದಿದ್ದರು.
ಮಂಜುನಾಥ್ 2007ನೇ ಬ್ಯಾಚ್ ನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ವೃತ್ತಿಗೆ ಸೇರಿಕೊಂಡಿದ್ದರು. ಕಳೆದ 2021 ರಲ್ಲಿ ಮುಖ್ಯಮಂತ್ರಿ ಪದಕವನ್ನು ಪಡೆದಿದ್ದರು.