ಉಡುಪಿ: ಉಡುಪಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಇವರು ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯನಿರತರಾಗಿದ್ದರು. ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರು ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿದ್ದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

