ಮೂಡಿಗೆರೆ: ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.
ಮಹಿಳೆ ಹಾಗೂ ಅವರ ಅಕ್ಕನ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಳು. ಇದೇ ವಿಚಾರಕ್ಕೆ 2022ರಲ್ಲಿ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಮಹಿಳೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಸಮನ್ಸ್ ಜಾರಿಗೊಳಿಸಲಾಗಿತ್ತು.
ಇದರಿಂದ ಬೇಸತ್ತು ಮಹಿಳೆ ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೀಗ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.