ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯಲ್ಲಿ ಸುಮಾರು 1.30 ಲಕ್ಷ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಸುಮಾರು 1,29,929 ಹುದ್ದೆಗಳನ್ನು ಸಿಆರ್ಪಿಎಫ್ ಭರ್ತಿ ಮಾಡಲಿದ್ದು, ಅದರಲ್ಲಿ 1,25,262 ಪುರುಷ ಅಭ್ಯರ್ಥಿಗಳಿಗೆ ಮತ್ತು 4667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
ಆಸಕ್ತ ಅಭ್ಯರ್ಥಿಗಳು crpf.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅವಶ್ಯಕತೆಗಳು : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಮೆಟ್ರಿಕ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ನೇರ ನೇಮಕಾತಿಗೆ ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಆಯ್ಕೆ ಕಾರ್ಯವಿಧಾನ : ಸಿಆರ್ಪಿಎಫ್ನಲ್ಲಿನ ಹುದ್ದೆಗಳಿಗೆ ಅಭ್ಯರ್ಥಿಗಳು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ಮತ್ತು ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಗೆ ನಿಗದಿಪಡಿಸಿದ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆಯಬೇಕಾಗುತ್ತದೆ. ಆದಾಗ್ಯೂ, ಮಾಜಿ ಅಗ್ನಿವೀರ್ಗಳಿಗೆ ಪಿಇಟಿಯಿಂದ ವಿನಾಯಿತಿ ನೀಡಲಾಗುವುದು.
ವೇತನ : ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ನೇಮಕಾತಿಯಲ್ಲಿ ನೇಮಕಗೊಂಡ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು : https://crpf.gov.in/recruitment.htm
