ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಂತ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ರಾಜೀನಾಮೆ ನೀಡಿದಂತ ಒಂದೇ ಗಂಟೆಯಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ
ಇಂದು ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದರು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.

ಹೀಗೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದಂತ ಒಂದೇ ಗಂಟೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಕಚೇರಿಯಲ್ಲಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಈ ಕುರಿತು ಮಾತನಾಡಿದಂತ ಡಿಕೆ ಶಿವಕುಮಾರ್, ಪಾಪ ಅವರು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. 6 ತಿಂಗಳ ಹಿಂದಯೇ ಕಾಂಗ್ರೆಸ್ ಬಿಟ್ಟು, ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಸಿಎಂ ಜೊತೆಗೂ ಮಾತನಾಡಿದ್ದೇನೆ ಎಂದಿದ್ದರು. ಅದೇನೋ ಎಂ ಎಲ್ ಸಿ ಮಾಡ್ತಾರಂತೆ. ಅದಕ್ಕೆ ಹೋಗಿದ್ದಾರೆ. ಒಳ್ಳೆಯದಾಗಲಿ, ಶುಭವಾಗಲಿ ಎಂದರು.

