ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ ಮಾಜಿ ಸಚಿವ, ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಮೋದ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನನಗೆ ಪಕ್ಷದಲ್ಲಿ ದುಡಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.
ಉಡುಪಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗದ ವಾತಾವರಣವಿದೆ. ನಾನು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇತ್ತೀಚಿಗೆ ನನಗೆ ಕೆಪಿಸಿಸಿ ಉಪಾಧ್ಯಕ್ಷನನ್ನಾಗಿ ನೇಮಿಸಿದ್ದೀರಿ ಅದಕ್ಕಾಗಿ ಧನ್ಯವಾದಗಳು, ಆದರೆ ನಾನು ಅದನ್ನು ಒಪ್ಪಿಕೊಳ್ಳುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾರೆ.
2018 ರಲ್ಲಿ ಸರ್ವೇಯೊಂದರಲ್ಲಿ ನಾನು ರಾಜ್ಯದ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಶಾಸಕರ ಪೈಕಿ ಮೊದಲಿಗನಾಗಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

