ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪುತ್ತೂರಿನ ಬಿಜೆಪಿ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮನೆಯ ಗೃಹ ಪ್ರವೇಶ ಇಂದು ನಡೆಯಲಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಲಿದ್ದು ಅವರಿಗೆ ಧಿಕ್ಕಾರ ಕೂಗುವ ಸಾಧ್ಯತೆ ಹಿನ್ನಲೆಯಲ್ಲಿ ಬಂದೋಬಸ್ತ್ ನ್ನು ಪೊಲೀಸ್ ಇಲಾಖೆ ಹೆಚ್ಚಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮುತುವರ್ಜಿಯಲ್ಲಿ ಪ್ರವೀಣ್ ನೆಟ್ಟಾರು ಮನೆ ನಿರ್ಮಾಣವಾಗಿದ್ದು, ನೆಟ್ಟಾರು ಪುತ್ಥಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅನಾವರಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು 2022ರ ಜುಲೈ 26ರಂದು ಪ್ರವೀಣ್ ನೆಟ್ಟಾರು ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದರು.