ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಆರೋಪಿಗಳ ಬಂಧನವಾಗಿದೆ.
ಈ ಬಗ್ಗೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಮತ್ತು ಯಾವ ವಕೀಲನೂ ಆರೋಪಿಗಳಿಗೆ ವಕಾಲತು ನಡೆಸಬಾರದು ಎಂದು ಪ್ರವೀಣ್ ತಾಯಿ ರತ್ನಾವತಿ ವಕೀಲರಿಗೆ ಮನವಿ ಮಾಡಿದ್ದಾರೆ.