Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

  Latest Posts

  ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

  ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

  ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

  ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

  ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

  ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

  ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

  ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

  ಅಯೋಧ್ಯೆಯಲ್ಲಿಂದು 7.50 ಲಕ್ಷ ದೀಪೋತ್ಸವ ; ವಿಶ್ವ ದಾಖಲೆಗೆ ಸಕಲ ಸಿದ್ಧತೆ

  ಅಯೋಧ್ಯೆ(ಉತ್ತರ ಪ್ರದೇಶ) : ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀರಾಮನ ಪವಿತ್ರ ಜನ್ಮಸ್ಥಳವಾದ ಅಯೋಧ್ಯೆಯ ಪವಿತ್ರ ಸರಯೂ ನದಿ ದಡದಲ್ಲಿರುವ ರಾಮ್ ಕಿ ಪೈಡಿ ಸಂಕೀರ್ಣವು ಇಂದು ಭವ್ಯವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಐದನೇ ವರ್ಷಾಚರಣೆಯಲ್ಲಿರುವ ಸಿಎಂ ಯೋಗಿ ಸರ್ಕಾರ ದೀಪೋತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಮಾಡಲಿದೆ.

  ಈ ಬಾರಿ ರಾಮ್ ಕಿ ಪೈಡಿ ದಡದಲ್ಲಿ 7 ಲಕ್ಷದ 50 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲಾಗುತ್ತಿದೆ. ಜಿಲ್ಲೆಯಾದ್ಯಂತ 12 ಲಕ್ಷ ದೀಪಗಳು ಮತ್ತು ಅಯೋಧ್ಯೆಯಲ್ಲಿ 9 ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತಿದೆ. ಸ್ವಯಂ ಸೇವಕರಿಂದ ನಿನ್ನೆ ತಡರಾತ್ರಿಯೇ ರಾಮ್ ಕಿ ಪೈಡಿ ಸಂಕೀರ್ಣದಲ್ಲಿ ಈ ಎಲ್ಲಾ ದೀಪಗಳನ್ನು ಅಳವಡಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರ ಅತಿಥಿಗಳ ಸಮ್ಮುಖದಲ್ಲಿ ಒಮ್ಮೆಗೆ ಈ ಎಲ್ಲಾ ದೀಪಗಳನ್ನು ಬೆಳಗಿಸಲಾಗುತ್ತದೆ.

  ದೀಪಗಳ ಸರಣಿ ನಡುವೆ ರಂಗೋಲಿ ಚಿತ್ತಾರ

  ಕಳೆದ 4 ವರ್ಷಗಳಿಂದ ಅಯೋಧ್ಯೆಯ ರಾಮ್ ಕಿ ಪೈಡಿ ಸಂಕೀರ್ಣದಲ್ಲಿ ಆಯೋಜಿಸಲಾಗುತ್ತಿರುವ ದೀಪೋತ್ಸವ ಕಾರ್ಯಕ್ರಮಕ್ಕೆ ಸಾವಿರಾರು ಜನರು ಸಾಕ್ಷಿಯಾಗುತ್ತಿರುವುದು ಗಮನಾರ್ಹವಾಗಿದೆ. ರಾಮನ ಆವರಣದಲ್ಲಿ ಎಲ್ಲಾ ದೀಪಗಳನ್ನು ಬೆಳಗಿಸಿದಾಗ ಇಡೀ ಸಂಕೀರ್ಣವು ದೀಪಗಳಿಂದ ಕಂಗೊಳಿಸಲಿದೆ.

  ಈ ವರ್ಷವೂ ಅಂತಹದ್ದೇ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ವೇಳೆ ಲೇಸರ್ ಲೈಟ್ ಶೋ ಮೂಲಕ ರಾಮನ ಕಥೆಯನ್ನು ಪ್ರದರ್ಶಿಸಲಾಗುತ್ತದೆ. ಇದಲ್ಲದೆ, ರಾಮನ ಜೀವನ ಪಾತ್ರವನ್ನು ರಾಮ್ ಕಿ ಪೈಡಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರು ರಂಗೋಲಿ ಮೂಲಕ ಪ್ರದರ್ಶಿಸಿದ್ದಾರೆ. ಇದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದಿದೆ. ರಂಗೋಲಿ ತಯಾರಿಸುವ ವಿದ್ಯಾರ್ಥಿನಿ ರುಚಿಕಾ ವರ್ಮಾ, ಮೂರೂವರೆ ಗಂಟೆಗಳ ಕಠಿಣ ಪರಿಶ್ರಮದಿಂದ, ರಾಮ ಮತ್ತು ತಾಯಿ ಸೀತೆಯ ಜೊತೆಗೆ ಅದೇ ಚಿತ್ರದಲ್ಲಿ ಅಯೋಧ್ಯೆ ಮತ್ತು ರಾಮ ಮಂದಿರವನ್ನು ಸಹ ಪ್ರದರ್ಶಿಸಿದ್ದೇನೆ ಎಂದು ಹೇಳಿದರು. ಈ ಸಮಾರಂಭದಲ್ಲಿ ಭಾಗಿಯಾಗಿದ್ದಕ್ಕೆ ತುಂಬಾ ಸಂತೋಷವಾಗಿದೆ ಎಂದು ತಮ್ಮ ಸಂಸತವನ್ನು ಹಂಚಿಕೊಂಡಿದ್ದಾರೆ.

  12,000 ಸ್ವಯಂಸೇವಕರಿಂದ ದೀಪಗಳ ಅಳವಡಿಕೆ

  ರಾಮ್ ಕಿ ಪೈಡಿ ಕ್ಯಾಂಪಸ್‌ನಲ್ಲಿ 7.50 ಲಕ್ಷ ದೀಪಗಳನ್ನು ಅಳವಡಿಸುವ ಜವಾಬ್ದಾರಿಯನ್ನು ಡಾ.ರಾಮ್ ಮನೋಹರ್ ಲೋಹಿಯಾ ಅವಧ್ ವಿಶ್ವವಿದ್ಯಾಲಯ ಮತ್ತು ಅದರ ಅಂಗಸಂಸ್ಥೆ ಕಾಲೇಜುಗಳ ವಿದ್ಯಾರ್ಥಿಗಳು ವಹಿಸಿಕೊಂಡಿದ್ದಾರೆ. ನಿನ್ನೆ ಸಂಜೆಯ ವೇಳೆಗೆ ಸಂಕೀರ್ಣದ ಎಲ್ಲಾ ಘಾಟ್‌ಗಳಲ್ಲಿ ದೀಪಗಳನ್ನು ಅಲಂಕರಿಸಲಾಗಿದೆ.

  ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಜ್ಞಾನಪ್ರಕಾಶ್ ತಿವಾರಿ ಮಾತನಾಡಿ, ಕಳೆದ ವರ್ಷ ಕೇವಲ 18 ಘಾಟ್‌ಗಳಲ್ಲಿ ಮಾತ್ರ ದೀಪಗಳು ಬೆಳಗಿಸಲಾಗಿತ್ತು. ಆಗ 5.30 ಲಕ್ಷ ದೀಪಗಳಿದ್ದವು. ಆದರೆ, ಈ ಬಾರಿ 7.50 ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತದೆ. ಈ ಬಾರಿ ನಮ್ಮ ತಂಡವನ್ನು ವಿಸ್ತರಿಸಿದ್ದೇವೆ. 12,000 ಸ್ವಯಂಸೇವಕರ ತಂಡವು 7.50 ಲಕ್ಷ ದೀಪಗಳನ್ನು ಅಳವಡಿಸಿದೆ. ಇಡೀ ಕ್ಯಾಂಪಸ್‌ನಲ್ಲಿ ಒಟ್ಟು 9 ಲಕ್ಷ ದೀಪಗಳು ಬೆಳಗಲಿದ್ದು, ಅವುಗಳಲ್ಲಿ ಕೆಲವು ದೀಪಗಳು ಸರಯೂ ನದಿ ದಡದಲ್ಲಿಯೂ ಬೆಳಗುತ್ತವೆ. ನಮ್ಮ ಸಿದ್ಧತೆಗಳು ಪೂರ್ಣಗೊಂಡಿದ್ದು, ಈ ಬಾರಿ ಮತ್ತೊಂದು ವಿಶ್ವ ದಾಖಲೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

  Latest Posts

  ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

  ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

  ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

  ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

  ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

  ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

  ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

  ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

  Don't Miss

  ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

  ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

  SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

  ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

  BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

  ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

  ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

  ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

  ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

  ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.