Thursday, September 28, 2023

“ಸಿರಿ ದೇವಿ ಮೈಮೆ” ತುಳು ಯಕ್ಷಗಾನ ಆಮಂತ್ರಣ ಪತ್ರಿಕೆ ಬಿಡುಗಡೆ

ತುಳು ಭಾಷೆಯಲ್ಲಿ ಪ್ರಪ್ರಥಮ ಬಾರಿಗೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ತುಳು ಭಾಗವತಿಕೆ ಸಹಿತ ತುಳು ಭಾಷೆಯಲ್ಲಿ ಸಿರಿ ದೇವಿ ಮೈಮೆ ಎಂಬ ಪ್ರಸಂಗ ದೊಂದಿಗೆ ನೂತನ ಪ್ರಯೋಗ ನಡೆಯಲಿದೆ.ಸಪ್ಟೆಂಬರ್ 30ರಂದು...
More

    Latest Posts

    ಕರ್ನಾಟಕ ಬಂದ್​ಗೆ ಕರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ

    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ದ.ಕ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆ: ಮುಖ್ಯಾಂಶಗಳು

    ಮಾದಕ ವಸ್ತು ಹಾವಳಿ ಮಂಗಳೂರಿನಲ್ಲಿ ವಿಪರೀತ ಹೆಚ್ಚಾಗುತ್ತಿದೆ. ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಪೊಲೀಸ್ ಆಯುಕ್ತರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಆಯುಕ್ತರ ಉತ್ತರದಿಂದ ಸಮಾಧಾನಗೊಳ್ಳದ ಮುಖ್ಯಮಂತ್ರಿಗಳು ಗೂಂಡಾಕಾಯ್ದೆ ಅಡಿಯಲ್ಲಿ ಅವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

    ಅನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಗುಂಪು, ಯಾವುದೇ ಸಿದ್ದಾಂತದವರು ಕಾನೂನು ಕೈಗೆತ್ತಿಕೊಂಡು ಅನೈತಿಕ ಪೊಲೀಸ್ ಗಿರಿ ನಡೆಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಿದರು.

    ಮಳೆಯಿಂದ ಪೂರ್ತಿಹಾನಿಯಾದ ಮನೆಗಳಿಗೆ 5 ಲಕ್ಷ ಪರಿಹಾರಕ್ಕೆ ಇಂದೇ ಆದೇಶ ಹೊರಡಿಸುತ್ತೇನೆ.

    ಮೊದಲಿದ್ದ ರೀತಿಯಲ್ಲೇ ಎ, ಬಿ, ಸಿ ಕೆಟಗರಿಯಲ್ಲಿ ವಿಂಗಡಿಸಿ ಪರಿಹಾರ ನೀಡಲು ಸೂಚನೆ.

    ಕಡಲ ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲು ತೀರ್ಮಾನಿಸಿದ್ದೇವೆ. ಕಡಲ ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.

    ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಸೇರಿಸಿ ಸಮಗ್ರ ಚರ್ಚೆ ಮಾಡಿ ಶಾಶ್ವತ ಪರಿಹಾರಕ್ಕೆ ಕ್ರಮ.

    ಸುಶಿಕ್ಷಿತರ ಜಿಲ್ಲೆ ಮಂಗಳೂರು ಶಿಕ್ಷಣ ಸೂಚ್ಯಂಕದಲ್ಲಿ ಕುಸಿಯುತ್ತಿರುವುದು ಒಳ್ಳೆ ಬೆಳವಣಿಗೆ ಅಲ್ಲ. ಈ ಬಗ್ಗೆ ಡಿಡಿಪಿಐ ಅವರಿಂದ ವಿವರಣೆ ಕೇಳಿದ ಸಿಎಂ.

    ಉಡುಪಿ, ಮಂಗಳೂರು ಯಾವಾಗಲೂ ಪ್ರಥಮ, ದ್ವಿತೀಯ ಸ್ಥಾನದಲ್ಲಿ ಇರುತ್ತಿತ್ತು. ಈಗೇಕೆ ಹೀಗೆ?

    ಅತ್ಯಂತ ಹಿಂದುಳಿದ ಜಿಲ್ಲೆ ಚಿತ್ರದುರ್ಗ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುತ್ತಿರುವ ಹೊತ್ತಲ್ಲಿ ಅತ್ಯಂತ ಮುಂದಿದ್ದ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿಯಲು ಕಾರಣ ಏನು? ಡಿಡಿಪಿಐ ಆದವರು ಬಿಇಒ ಗಳನ್ನು ಈ ಬಗ್ಗೆ ಪ್ರಶ್ನಿಸಬೇಕು.

    ಆರೋಗ್ಯ ಸೂಚ್ಯಂಕದಲ್ಲೂ ಕುಸಿದಿದೆ. ದಕ ಜಿಲ್ಲೆ 2015 ರಲ್ಲಿ 3 ಸ್ಥಾನದಲ್ಲಿತ್ತು. ಈಗ 23ನೇ ಸ್ಥಾನಕ್ಕೆ ಕುಸಿದಿದೆ. ಏಕೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಪ್ರಶ್ನಿಸಿದರು. ಎರಡು ವರ್ಷಗಳಿಂದ ಏನು ಪ್ರಗತಿ ಸಾಧಿಸಲಿಲ್ಲ ಏಕೆ ಎಂದು ಪ್ರಶ್ನಿಸಿದರು.

    ತಾಯಿ ಮಕ್ಕಳ ಮರಣ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆ ಆಗುತ್ತಿರುವುದಕ್ಕೆ ಎಂ.ಎಂ.ಆರ್ ಸಮೀಕ್ಷೆಯ ವರದಿಯನ್ನು ಓದಿ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಪ್ರಶ್ನಿಸಿದರು.

    ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಇನ್ನು ಮುಂದೆ ಅವರಿಗೆ ನೀಡಿದ ಕ್ವಾಟ್ರಸ್ ಗಳಲ್ಲೇ ನೆಲೆಸುವಂತೆ ಕ್ರಮ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

    ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗಬಾರದು. ಒಮ್ಮೆ ಬೀಜ, ರಸಗೊಬ್ಬರ ಕೊಟ್ಟರೆ ಮುಗಿಯಿತು ಎಂದು ಅಧಿಕಾರಿಗಳು ವರ್ತಿಸಬಾರದು. ಬೆಳೆಹಾನಿಯಾಗಿ ಮತ್ತೆ ಬೀಜ, ರಸಗೊಬ್ಬರಕ್ಕೆ ಬೇಡಿಕೆ ರೈತರಿಂದ ಬಂದರೆ ಬೇಡಿಕೆ ಪೂರೈಸಬೇಕು ಎಂದು ಸೂಚಿಸಿದರು.

    ಅಡಿಕೆಗೆ ಎಲೆಚುಕ್ಕೆ ರೋಗ, ಹಳದಿ ರೋಗ, ಕೀಟ ಬಾದೆ ಯಾವ ಪ್ರಮಾಣದಲ್ಲಿ ಬಂದಿದೆ ಎನ್ನುವ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಸಂಬಂಧ ಕೃಷಿ ವಿಜ್ಞಾನಗಳು ಹಾಗೂ ತಜ್ಞರನ್ನು ಕರೆದು ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

    ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ನಿಂದ 2 ಲಕ್ಷ ಕಿಲೋ ಲೀಟರ್ಗಳವರೆಗೆ ಹೆಚ್ಚಿಸಿದ್ದೇವೆ. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವು ನೀಡಿದ್ದೇವೆ. ಇದು ಮೀನುಗಾರ ಸಮುದಾಯಕ್ಕೆ ತಲುಪುತ್ತದೆಯೇ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಇದರಿಂದ ಸಮುದಾಯಕ್ಕೆ ದೊಡ್ಡ ಅನುಕೂಲವಾಗಿದೆ ಎಂದು ಉತ್ತರಿಸಿದರು.

    ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್ಗಳನ್ನು ಪೆಟ್ರೋಲ್ ಇಂಜಿನ್ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡುತ್ತಿದ್ದೇವೆ. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ನಾವು ಆಯವ್ಯವಯದಲ್ಲಿ ಘೋಷಿಸಿದ್ದೇವೆ, ಈ ಕಾರ್ಯಕ್ರಮ ಸರಿಯಾಗಿ ಜಾರಿಯಾವಂತೆ ಕ್ರಮ ವಹಿಸಲು ಅಧಿಕಾರಿಗಳು ಸೂಚಿಸಿದರು.

    ಶಕ್ತಿ ಯೋಜನೆಯಿಂದ ಜನರಿಂದ ಮತ್ತು ವಿದ್ಯಾರ್ಥಿ ಸಮೂಹದಿಂದ  ಉತ್ತಮ ಸ್ಪಂದನೆ ಇರುವುದರಿಂದ ಸದ್ಯದಲ್ಲೇ 4000 ಹೆಚ್ಚುವರಿ ಬಸ್ ಗಳನ್ನು ಖರೀದಿಸುವುದಾಗಿ ಸಿಎಂ ತಿಳಿಸಿದರು,

    ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳ ಲಾಭ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿಗೂ ದೊರಕುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

    ಆರೋಗ್ಯ ಸೂಚ್ಯಂಕದ ಮಧ್ಯೆ:

    ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ ಮತ್ತು ಶಿಕ್ಷಣದಲ್ಲಿ ಅತ್ಯಂತ ಹಿಂದುಳಿಯುತ್ತಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಿಎಂ ತರಾಟೆಗೆ ತೆಗೆದುಕೊಳ್ಳುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಶಾಸಕ ಉಮಾನಾಥ ಕೋಟ್ಯಾನ್ ಅವರು ಗ್ರಾಮ ಪಂಚಾಯ್ತಿ ಕಟ್ಟಡವೊಂದರ ಉದ್ಘಾಟನೆ ತಡೆ ಹಿಡಿದಿದ್ದಕ್ಕೆ ಕಾರಣ ಏನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಎಂ ಯಾವುದೇ ಕಾರಣಕ್ಕೂ ಪ್ರೋಟೋಕಾಲ್ ಉಲ್ಲಂಘಿಸಬಾರದು. ಶಾಸಕರು ಯಾವುದೇ ಪಕ್ಷದವರಿರಲಿ ಅವರನ್ನು ಅಧಿಕಾರಿಗಳು ಜನಪ್ರತಿನಿಧಿಗಳು ಎಂದು ಪರಿಗಣಿಸಿ ಅವರಿಗೆ ಗೌರವ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಇದಾದ ಬಳಿಕ ಮತ್ತೆ ಆರೋಗ್ಯ ಮತ್ತು ಶಿಕ್ಷಣದ, ಕೃಷಿ ಸಮಸ್ಯೆಗಳ ಕುರಿತು ಬಗ್ಗೆ ಸಭೆ ಮುಂದುವರೆಯಿತು.

    ಒಂದು ದಿನದಲ್ಲಿ ವೈದ್ಯರನ್ನು ನೇಮಿಸಿ:

    ಜಿಲ್ಲೆಯ ಸರಕಾರಿ ಆರೋಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಪ್ರಶ್ನಿಸುತ್ತಿದ್ದ ವೇಳೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು, “ಜಿಲ್ಲಾ ಉಸ್ತುವಾರಿ ಸಚಿವರೂ, ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಖಾಲಿ ಇರುವ ಎಲ್ಲಾ ವೈದ್ಯ ಹುದ್ದೆಗಳನ್ನು ಒಂದೇ ದಿನದಲ್ಲಿ ಭರ್ತಿ ಮಾಡಿ” ಎಂದು ಮನವಿ ಇಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕಳೆದ ಐದು ವರ್ಷದಿಂದ ನಿಮ್ಮದೇ ಸರ್ಕಾರ ಇತ್ತು. ಐದು ವರ್ಷದಲ್ಲಿ ಮಾಡದ್ದನ್ನು ನಮಗೆ ಒಂದೇ ದಿನದಲ್ಲಿ ಮಾಡಲು ಹೇಳುತ್ತಿದ್ದೀರಿ ಎಂದರು.

    Latest Posts

    ಕರ್ನಾಟಕ ಬಂದ್​ಗೆ ಕರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ

    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    Don't Miss

    ಗಣೇಶ ಹಬ್ಬದ ಪ್ರಯುಕ್ತ ಮದ್ಯದ ಬಾಟಲಿ ಗೆಲ್ಲುವ ಲಾಟರಿ ಟಿಕೆಟ್ ಫೋಟೋ ವೈರಲ್

    ಸುಳ್ಯ: ಕೋಟ್ಯಂತರ ಹಿಂದೂಗಳ ಪವಿತ್ರ ಹಬ್ಬ ಶ್ರೀ ಗಣೇಶೋತ್ಸವ. ಧಾರ್ಮಿಕ ನಂಬಿಕೆಯ ತಳಹದಿಯ ಮೇಲೆ ಈ ಹಬ್ಬವನ್ನು ದೇಶದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಆದರೆ ಕೆಲವರು ಈ ಹಬ್ಬಕ್ಕೆ ಕಳಂಕ...

    ಚೈತ್ರಾ ಕುಂದಾಪುರ ಪ್ರಕರಣದ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ

    ಬೆಂಗಳೂರು : ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ...

    ನಂತೂರು ಜಂಕ್ಷನ್‌ನಲ್ಲಿದ್ದ ರಸ್ತೆ ಹೊಂಡ ಮುಚ್ಚಿದ ಟ್ರಾಫಿಕ್ ಪೊಲೀಸರು

    ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ...

    ‘ಯಜಮಾನಿ ಮಹಿಳೆ’ಯರೇ ನಿಮಗೆ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ? ಇಲ್ಲಿದೆ ಕಾರಣ

    ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈಗಾಗಲೇ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಪ್ರೋತ್ಸಾಹ ಹಣವನ್ನು ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಜಮಾ...

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಚರಂಡಿಗೆ ಪಲ್ಟಿ

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.