Thursday, March 28, 2024
spot_img
More

    Latest Posts

    ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತಮುತ್ತ ನಿಷೇಧಾಜ್ಞೆ ಜಾರಿ

    ಮಂಗಳೂರು: ಮಳಲಿ ಪೇಟೆಯ ಜುಮ್ಮಾ ಮಸೀದಿ ನವೀಕರಣದ ವೇಳೆ ದೇವಾಲಯ ಮಾದರಿಯ ರಚನೆ ಕಂಡು ಬಂದ ಹಿನ್ನಲೆ ತಾಂಬೂಲ ಪ್ರಶ್ನೆ ಮುಂದಾಗಿದ್ದ ಹಿಂದೂಪರ ಸಂಘಟನೆಗಳಿಗೆ ಪೊಲೀಸ್ ಇಲಾಖೆ ಶಾಕ್ ನೀಡಿದ್ದು, ಇಂದಿನಿಂದ ಮೇ 26 ರವರೆಗೆ ಮಸೀದಿ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ.

    ತೆಂಕ ಉಳಿಪಾಡಿಯ ಮಳಲಿ ಪೇಟೆಯ ಜುಮ್ಮಾ ಮಸೀದಿ ನವೀಕರಣದ ವೇಳೆ ದೇವಾಲಯ ಮಾದರಿಯ ರಚನೆ ಕಂಡು ಬಂದ ಹಿನ್ನಲೆ ಮಳಲಿ ಮಸೀದಿಯ ಅನತಿ ದೂರದಲ್ಲಿರುವ ರಾಮಾಂಜನೇಯ ಭಜನಾ ಮಂದಿರದಲ್ಲಿ ನಾಳೆ ತಾಂಬೂಲ ಪ್ರಶ್ನೆ ನಡೆಸಲು ಹಿಂದೂ ಸಂಘಟೆಗಳು ಮುಂದಾಗಿವೆ.

    ಬೆಳಿಗ್ಗೆ 8 ಗಂಟೆಯಿಂದ ಕೇರಳದ ಜ್ಯೋತಿಷಿ ಪುದುವಾಳ್ ತಾಂಬೂಲ ಪ್ರಶ್ನೆ ಇಡಲಿದ್ದಾರೆ. ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆ ಮೇಲೆ, ದೈವಿ ಶಕ್ತಿ ಪತ್ತೆ ಕಾರ್ಯ ನಡೆಯುತ್ತದೆ.ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯದಲ್ಲಿ ಸಂಘಟನೆ ಸದಸ್ಯರು, ಸ್ಥಳೀಯರು, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

    ಈ ನಡುವೆ ಪೊಲೀಸ್ ಇಲಾಖೆ 24-05-2022 ರ ಸಂಜೆ 08:00 ಗಂಟೆಯಿಂದ ರಿಂದ ದಿನಾಂಕ: 26-05-2022 ರ ಬೆಳಿಗ್ಗೆ 08:00 ಗಂಟೆಯವರೆಗೆ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತಮುತ್ತಲಿನ 500 ಮೀಟರ್ (ಕಾಚಿಲಕೋಡಿಯಿಂದ ಮಳಲಿ ಕಡಗೆ ಬರುವ ರಸ್ತೆ, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ ಹಾಗೂ ಕೈಕಂಬ ಕಡೆಯಿಂದ ಜೋಡುತಮ ರಸ್ತೆ) ರವರೆಗೆ ವ್ಯಾಪ್ತಿಯನ್ನು ಸಂಪೂರ್ಣ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss