Wednesday, July 24, 2024
spot_img
More

    Latest Posts

    ಕುಂದಾಪುರ: ಹೆರಿಗೆ ಸಂದರ್ಭ ಮಗು ಸಾವು – ಆಸ್ಪತ್ರೆ ವಿರುದ್ದ ಪ್ರತಿಭಟನೆ

    ಕುಂದಾಪುರ : ವೈದ್ಯರ ನಿರ್ಲಕ್ಷದಿಂದಾಗಿ ಹೆರಿಗೆ ಸಂದರ್ಭ ಮಗು ಸಾವನಪ್ಪಿದೆ ಎಂದು ಸಾರ್ವಜನಿಕರು ಹಾಗೂ ಕುಟುಂಬಸ್ಥರು ಕುಂದಾಪುರ ಸರಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ ಸಂಜೆ ನಡೆದಿದೆ.

    ನವೆಂಬರ್ 17ರಂದು ರಾತ್ರಿ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಮನೆಯವರಿಗೆ ಮಾಹಿತಿ ನೀಡಿದರು. ವೈದ್ಯರ ನಿರ್ಲಕ್ಷ್ಯ ದಿಂದಲೇ ಮಗು ಮೃತಪಟ್ಟಿದೆ ಎಂದು ಮನೆಯವರು ಹಾಗೂ ಗ್ರಾಮಸ್ಥರು ಆರೋಪಿಸಿದರು.

    ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದ ಜ್ಯೋತಿ ಖಾರ್ವಿ ಅವರು ನವಂಬರ್ 16ರಂದು ಚೆಕಪ್ ಮಾಡಿಸಿಕೊಳ್ಳಲು ಕುಂದಾಪುರ ತಾಲೂಕು ಆಸ್ಪತ್ರೆಗೆ ಬಂದಿದ್ದರು. ಆ ಸಂದರ್ಭ ಎಂಟೂವರೆ ತಿಂಗಳ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವ ಬಗ್ಗೆ ವೈದ್ಯರಲ್ಲಿ ಪ್ರಸ್ತಾವಿಸಿದಾಗ ಅದೇನೂ ಬೇಡ ಎಂದಿದ್ದರು ಎನ್ನಲಾಗಿದೆ. ಬಳಿಕ ಮನೆಗೆ ಹಿಂತಿರುಗಿದ್ದು. ಮಾರನೇ ದಿನ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪತಿ ಶ್ರೀನಿವಾಸ ಖಾರ್ವಿಯವರು ಪತ್ನಿಯನ್ನು ಕುಂದಾಪುರ ಸರ್ಕಾರೀ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಅಲ್ಲಿ ಸರಿಯಾಗಿ ಡ್ಯೂಟಿ ಡಾಕ್ಟರ್ ಕೂಡಾ ಇಲ್ಲದೇ ಅಡ್ಮಿಷನ್ ಮಾಡಿಸಿಕೊಂಡಿರಲಿಲ್ಲ ಎನ್ನಲಾಗಿದೆ. ನವೆಂಬರ್ 20ರಂದು ಬೆಳಿಗ್ಗೆ ನಾರ್ಮಲ್ ಡೆಲಿವರಿ ಆಗಿದೆ. ಆದರೆ ಹೆರಿಗೆ ಆದ ತಕ್ಷಣ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಶ್ರೀನಿವಾಸ ಖಾರ್ವಿಯಲ್ಲಿ ತಿಳಿಸಿದ್ದಾರೆ. ಕಾರಣ ಕೇಳಿದಾಗ ಮಗುವಿನ ಕುತ್ತಿಗೆಗೆ ಕರುಳು ಸಿಕ್ಕಿಹಾಕಿಕೊಂಡಿತ್ತು ಎನ್ನಲಾಗಿದೆ. ಇದರಿಂದ ಆಕ್ರೋಶಿತಗೊಂಡ ಸಾರ್ವಜನಿಕರು ಎಲ್ಲವೂ ಸರಿಯಾಗಿದ್ದ ಮೇಲೆ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಲಾಗುತ್ತಿದೆ.

    ನಿರ್ಲಕ್ಷ್ಯ ವಹಿಸಿದ ವೈದ್ಯರನ್ನು ಕೂಡಲೇ ಅಮಾನತು ಮಾಡಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳದಲ್ಲೇ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಡಿಸಿ, ಜಿಲ್ಲಾ ಆರೋಗ್ಯಾಧಿಕಾರಿ ಬರು ವಂತೆ ಪ್ರತಿಭಟನಕಾರರು ಪಟ್ಟು ಹಿಡಿದರು. ಸಂಜೆ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಭೇಟಿ ನೀಡಿ ಪ್ರತಿಭಟನಕಾರರಿಂದ ಅಹವಾಲು ಸ್ವೀಕರಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss