Tuesday, September 17, 2024
spot_img
More

    Latest Posts

    ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಭಜರಂಗದಳ, ದುರ್ಗಾವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ

    ಮಂಗಳೂರು: ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.
    ಮಂಗಳೂರಿನ ಜ್ಯೋತಿ ವೃತ್ತ, ಉರ್ವಸ್ಟೋರ್, ಕಾವೂರು, ಮೂಡಬಿದ್ರೆ, ತೊಕ್ಕೊಟ್ಟು, ಗುರುಪುರ ಕೈಕಂಬ, ಸುರತ್ಕಲ್ ನಲ್ಲಿ ಅಭಿಯಾನ ನಡೆಯಿತು.

    ಇಸ್ಲಾಮಿಕ್ ಭಯೋತ್ಪಾದನೆ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಘೋಷಣೆ ಕೂಗಿದರು. ಮಂಗಳೂರಿನ ಜ್ಯೋತಿ ಬಳಿ ನಡೆದ ಅಭಿಯಾನದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಯೋತ್ಪಾದಕರು ಹಲವು ಹಿಂದೂ ದೇಗುಲಗಳನ್ನು ಸ್ಫೋಟಿಸುವ ಸಂಚು ಹೂಡಿದ್ದರು ಎಂದು ತಿಳಿದು ಬಂದಿದೆ. ಅಂತಹ ಸಂಚನ್ನ ವಿಫಲಗೊಳಿಸಲು ವಿಶ್ವ ಹಿಂದೂ ಪರಿಷತ್ ದೇಗುಲದ ಪರ ನಿಲ್ಲಲಿದೆ. ಕುಕ್ಕರ್ ಸ್ಫೋಟದಲ್ಲಿ ಗಾಯಾಳಾಗಿರುವ ಆರೋಪಿ ಶಾರಿಕ್ ನ ಪರ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ವಕೀಲರು ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ. ಇನ್ನೂ ಕಾವೂರಿನಲ್ಲಿ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಹಲವಾರು ಮಂದಿ ಭಾಗವಹಿಸಿದ್ರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss