ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆದಿದೆ. ಐದು ಮತ್ತು ಎಂಟನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. 5.8 ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದವು.
5, 8 ನೇ ತರಗತಿಗೆ ಬೊರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಗೆ ವಕೀಲರು ಮನವಿ ಮಾಡಿದ್ದರು. ಮಾರ್ಚ್ 27 ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿತ್ತು.ಹೀಗಾಗಿ ಇಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
