Friday, April 19, 2024
spot_img
More

    Latest Posts

    ದ್ವಿತೀಯ ಪಿಯುಸಿ ಪರೀಕ್ಷೆಗೂ `ಹಿಜಾಬ್’ ನಿಷೇಧ : ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

    ಬೆಂಗಳೂರು : ಎಸ್‌ಎಸ್ ಎಲ್ ಸಿ ಪರೀಕ್ಷೆಯಂತೆಯೇ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಿಜಾಬ್ ನಿಷೇಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್, ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಈ ಬಗ್ಗೆ ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದು ತಿಳಿಸಿದ್ದಾರೆ. ಎಸ್ ಎಸ್‌ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗುವುದು. ಏಪ್ರಿಲ್ 22 ರಿಂದ ಮೇ. 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು. ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ. ಮುಖ್ಯ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೆ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss