ಮೂಡಬಿದ್ರಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ಮೂಡಬಿದ್ರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ಇಂದು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನೋಜ್(18) ಎಂಬ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ.
ಮೃತ ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿ ತರ್ಚಿಹಾಳ ಗ್ರಾಮದ ಮಲ್ಲಪ್ಪ ಎಂಬುವರ ಪುತ್ರ ಎಂಬುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಪೋಷಕರು ನಾವು ಸ್ಥಳಕ್ಕೆ ಆಗಮಿಸೋವರೆಗೆ ಪುತ್ರನ ಶವವನ್ನು ಇಳಿಸದಂತೆ ಆಗ್ರಹಿಸಿದ್ದಾರೆ.
ಈ ವಿಷಯ ತಿಳಿದು ಮೂಡಬಿದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನವನ್ನು ವ್ಯಕ್ತಪಡಿಸಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.