Thursday, April 18, 2024
spot_img
More

    Latest Posts

    ನಾಳೆಯಿಂದ `ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

    ಬೆಂಗಳೂರು: ಮೇ. 23 ರ ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ( Karnataka 2nd PUC Supplementary Exam Timetable ) ನಡೆಯಲಿದ್ದು, ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ https://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

    ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಮೇ, ಜೂನ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 22-05-2023ರಿಂದ 02-06-2023ರವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು ಎಂದು ತಿಳಿಸಿದ್ದಾರೆ.

    ಆದ್ರೇ ಸಿಇಟಿ ಮೂಲಕ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 22-05-202ರಂದು ನಡೆಸುತ್ತಿರುವುದರಿಂದ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿ ದಿನಾಂಕ 23-05-2023ರಿಂದ 03-06-2023ರವರೆಗೆ ನಡೆಸಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

    ಹೀಗಿದೆ ಪರಿಷ್ಕೃತ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

    • ದಿನಾಂಕ 23-05-2023, ಮಂಗಳವಾರ – ಕನ್ನಡ, ಅರೇಬಿಕ್
    • ದಿನಾಂಕ 24-05-2023, ಬುಧವಾರ ಲ- ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ
    • ದಿನಾಂಕ 25-05-2023, ಗುರುವಾರ – ಇಂಗ್ಲೀಷ್
    • ದಿನಾಂಕ 26-05-2023, ಶುಕ್ರವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    • ದಿನಾಂಕ 27-05-2023, ಶನಿವಾರ – ಇತಿಹಾಸ, ಸಂಖ್ಯಾಶಾಸ್ತ್ರ
    • ದಿನಾಂಕ 29-05-2023, ಸೋಮವಾರ – ಹಿಂದಿ
    • ದಿನಾಂಕ 30-05-2023, ಮಂಗಳವಾರ – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
    • ದಿನಾಂಕ 31-05-2023, ಬುಧವಾರ – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
    • ದಿನಾಂಕ 01-06-2023, ಗುರುವಾರ – ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
    • ದಿನಾಂಕ 02-06-2023, ಶುಕ್ರವಾರ – ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
    • ದಿನಾಂಕ 03-06-2023, ಶನಿವಾರ – ಅರ್ಥಶಾಸ್ತ್ರ, ಜೀವಶಾಸ್ತ್ರ
    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss