ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಅಂದಾಜು 10 ಕೋಟಿ ವೆಚ್ಚದಲ್ಲಿ 18 ಸಾವಿರ ಚದರಡಿ ವಿಸ್ತೀರ್ಣದಲ್ಲಿ ನೂತಮ ಆಸ್ಪತ್ರೆ ನಿರ್ಮಾಣ ವಾಗಲಿದೆ, ಶೀಘ್ರವಾಗಿ ಕಾಮಗಾರಿ ಆರಂಭಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಬೇಟಿ ನೀಡಿ ನೀಲನಕಾಶೆಯನ್ನು ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. ಸರಕಾರ ಆರೋಗ್ಯ ದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದು, ಎಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ಸರಕಾರ ಮಾಡುತ್ತಿದೆ.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿಪುಷ್ಪಾನಂದ ಪ್ರಮುಖರಾದ ಅಜಿತ್ ಶೆಟ್ಟಿ ಕಾರಿಂಜ, ದಯಾನಾಯಕ್ ,ಯೋಗೇಂದ್ರ ಕುಮಂಗಿಲ, ಸುದರ್ಶನ ಬಜ, ರಮನಾಥ ರಾಯಿ, ಯಶೋಧರ ಕರ್ಬೆಟ್ಟು, ದಿನೇಶ್ ಶೆಟ್ಟಿ ದಂಬೆದಾರ್, ಚಿದಾನಂದ ರೈ ಕಕ್ಯ, ಪ್ರಶಾಂತ್ ಪುಂಜಾಲಕಟ್ಟೆ, ರಮೆಶ್ ಶೆಟ್ಟಿ ಮಜಲೋಡಿ,
ಚಂದ್ರಶೇಖರ್ ಶೆಟ್ಟಿ, ಆರೋಗ್ಯ ಇಲಾಖೆಯ ಇಂಜಿನಿಯರ್ ರಾಜೇಶ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ರಶ್ಮಿ ಎಸ್. ಆರ್, ತಹಶೀಲ್ದಾರ್ ಸ್ಮಿತಾರಾಮ್ ಮಂಡ್ಯ, ಪಿ.ಡಿ.ಒ.ಯಮನಪ್ಪ ಮತ್ತಿತರರು ಉಪಸ್ಥಿತರಿದ್ದರು.
