ಬಂಟ್ವಾಳ : ಹೃದಯಾಘಾತದಿಂದ ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಎಂದು ಗುರುತಿಸಲಾಗಿದೆ.
ಪುರುಷೋತ್ತಮ ಅವರು ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾಗಿ ಸಾಮಾಜಿಕ ಸೇವೆಯ ಮೂಲಕ ಚಿರಪರಿಚಿತರಾಗಿದ್ದರು.
ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪ ಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಸುಮಾರು ಒಂದು ಗಂಟೆ ವೇಳೆ ಇವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸಿದೆ ಅವರು ಮೃತಪಟ್ಟ ಬಗ್ಗೆ ತಿಳಿದುಬಂದಿದೆ.