ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಯುವಕನೊಬ್ಬ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭಿಣಿಯಾದ ಬಳಿಕ ಆತ ವಿವಾಹವಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮನೀಡಿದ್ದಾಳೆ ಎಂದು ತಿಳಿದು ಬಂದಿದೆ.
ಬಪ್ಪಳಿಗೆ ನಿವಾಸಿ ಕೃಷ್ಣರಾವ್ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
2024ರ ಅ.11ರಂದು ಆರೋಪಿ ಕೃಷ್ಣ ಸಂತ್ರಸ್ತ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಕೆಲವು ತಿಂಗಳ ನಂತರ ಸಂತ್ರಸ್ತೆ ಗರ್ಭಿಣಿಯಾಗಿದ್ದು, ವಿಚಾರವನ್ನು ಆರೋಪಿ ಕೃಷ್ಣನಿಗೆ ತಿಳಿಸಿದ್ದಾನೆ.
ಈ ವೇಳೆ ಮನೆಯವರ ಬಳಿ ಈ ವಿಚಾರ ಹೇಳದಿದ್ದರೆ ತಾನು ಮದುವೆಯಾಗುವುದಾಗಿ ಹೇಳಿದ್ದ. ಬಳಿಕ ಮದುವೆಗೆ ನಿರಾಕರಿಸಿದ್ದ ಯುವಕನ ಮೇಲೆ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದಳು, ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ತಲೆಮರೆಸಿಕೊಂಡಿದ್ದಾನೆ.
ಪೊಲೀಸರು ಅತ್ಯಚಾರ ಹಾಗೂ ನಂಬಿಕೆ ದ್ರೋಹ ಪ್ದಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
